ಸವದತ್ತಿಯಲ್ಲಿ ಪಲ್ಸ್ ಪೋಲಿಯೊಗೆ ಚಾಲನೆ
Pulse polio launched in Savadatti
ಸವದತ್ತಿ 28: ಮಕ್ಕಳನ್ನು ಪೋಲಿಯೊದಿಂದ ಸಂಪೂರ್ಣವಾಗಿ ರಕ್ಷಿಸುವ ಉದ್ದೇಶದಿಂದ ತಾಲೂಕಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಶಾಸಕ ವಿಶ್ವಾಸ್ ವೈದ್ಯ ಚಾಲನೆ ನೀಡಿದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೊ ಹನಿ ಹಾಕಿಸಿ ಮಾತನಾಡಿದ ಅವರು, ಭಾರತವನ್ನು ಪೋಲಿಯೊ ಮುಕ್ತ ರಾಷ್ಟ್ರವಾಗಿಯೇ ಉಳಿಸಿಕೊಳ್ಳಲು ಪ್ರತಿಯೊಬ್ಬ ಪೋಷಕರೂ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಕರೆ ನೀಡಿದರು. ಸರ್ಕಾರದ ಕಾರ್ಯಕ್ರಮಗಳ ಜೊತೆಗೆ ಸಾರ್ವಜನಿಕರ ಸಹಭಾಗಿತ್ವವೂ ಅತ್ಯಗತ್ಯವಾಗಿದೆ ಎಂದು ಹೇಳಿದರು.
ತಾಲೂಕಿನಾದ್ಯಂತ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲು ಶ್ರಮಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀಪಾದ ಸಬನೀಸ್, ಮುಖ್ಯ ವೈದ್ಯಾಧಿಕಾರಿ ಡಾ. ಎಚ್.ಎಂ. ಮಲ್ಲನಗೌಡ, ಡಾ. ಮಂಜುನಾಥ ಬಾರಕೇರ, ಡಾ. ರಿಜ್ವಾನ್ ದೇಸಾಯಿ, ಡಾ. ರಜಪೂತ, ಸತೀಶ ದಬಡೆ, ಅಶೋಕ ಮುರುಗೋಡ, ಸಿಡಿಪಿಒ ಅಮೃತ ಸಾಣಿಕೊಪ್ಪ, ಬಸವರಾಜ ಅಯ್ಯನಗೌಡ್ರ, ಡಾ. ಕಾಡರಕೊಪ್ಪ, ಸುರೇಶ್ ತುಪ್ಪದ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಲಸಿಕಾ ಕೇಂದ್ರಗಳಲ್ಲಿ ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಕಾರ್ಯ ಯಶಸ್ವಿಯಾಗಿ ನಡೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 