5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್‌ ಪೋಲಿಯೊ ಲಸಿಕೆ ಅಭಿಯಾನ ಆರಂಭ

5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್‌ ಪೋಲಿಯೊ ಲಸಿಕೆ ಅಭಿಯಾನ ಆರಂಭ  Pulse polio vaccination campaign begins for children under 5 years of age

ಲೋಕದರ್ಶನ ವರದಿ 

ಯರಗಟ್ಟಿ 28 :  ಮಕ್ಕಳನ್ನು ಅಂಗವೈಕಲ್ಯದಿಂದ ರಕ್ಷಿಸುವ ಉದ್ದೇಶದಿಂದ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್‌ ಪೋಲಿಯೊ ಲಸಿಕೆ ನೀಡುವ ವಿಶೇಷ ಅಭಿಯಾನವನ್ನು ಆರೋಗ್ಯ ಇಲಾಖೆ ಆರಂಭಿಸುತ್ತಿದೆ ಎಂದು ಡಾ. ರಾಜಶೇಖರ್ ಯರರ ತಿಳಿಸಿದ್ದಾರೆ.  

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಈಗಾಗಲೇ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಮುಂದಿನ ಪೀಳಿಗೆಯಲ್ಲಿ ರೋಗ ಮರುಕಳಿಸದಂತೆ ಎಚ್ಚರಿಕೆಯಿಂದ ಲಸಿಕೆ ಅಭಿಯಾನ ಮುಂದುವರಿಸಲಾಗುತ್ತಿದೆ ಎಂದು ಹೇಳಿದರು. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುವುದು ಅತ್ಯಂತ ಅಗತ್ಯವಾಗಿದ್ದು, ಪೋಷಕರು ಸಹಕರಿಸಬೇಕು ಎಂದು ಮನವಿ ಮಾಡಿದರು.  

ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದಂತೆ, ಜೂನ್ 28ರಿಂದ ಜುಲೈ 1ರವರೆಗೆ ತಾಲೂಕಿನಾದ್ಯಂತ ಲಸಿಕೆ ಅಭಿಯಾನ ನಡೆಯಲಿದೆ. ಈ ಅವಧಿಯಲ್ಲಿ ಒಟ್ಟು 1185 ಮಕ್ಕಳಿಗೆ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಪಕೇಂದ್ರಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿರುತ್ತದೆ. ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ನೀಡುವಂತೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.