ಪುಲ್ವಾಮಾ : ಅಗ್ನಿ ಆಕಸ್ಮಿಕದಲ್ಲಿ ಲಕ್ಷಾಂತರ ಮೌಲ್ಯದ ಆಸ್ತಿಪಾಸ್ತಿ ನಷ್ಟ

ಶ್ರೀನಗರ, ಮೇ 14,ಪುಲ್ವಾಮಾದ ದಕ್ಷಿಣ ಕಾಶ್ಮೀರ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಪುಲ್ವಾಮಾದ ಸಾಂಬೂರಾ ಮಾರುಕಟ್ಟೆಯಲ್ಲಿನ ಅಂಗಡಿಯಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತು.  ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪುವಷ್ಟರಲ್ಲಿ  ಪಕ್ಕದ ಅಂಗಡಿಗಳಿಗೆ ಬೆಂಕಿ ಹರಡಿತು ಎಂದು ಹೇಳಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.  ಆದರೆ, ಘಟನೆಯಲ್ಲಿ ನಾಲ್ಕು ಅಂಗಡಿಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಇತರ ಆಸ್ತಿಪಾಸ್ತಿ ನಷ್ಟವಾಗಿದೆ.  ಪ್ರಾಣಹಾನಿ ಅಥವಾ ಗಾಯದ ಬಗ್ಗೆ ಯಾವುದೇ ವರದಿಯಾಗಿಲ್ಲ, ಹಾಗೂ ಅಗ್ನಿ ಆಕಸ್ಮಿಕದ ಖಚಿತ ಕಾರಣ ತಿಳಿದುಬಂದಿಲ್ಲ.   ಪೊಲೀಸರು ಪ್ರಕರಣವನ್ನು ದಾಖಲಿಸಿದ್ದು, ವಿಚಾರಣೆ ಪ್ರಾರಂಭಿಸಿದ್ದಾರೆ.