ಕನಿಷ್ಠ ಬೆಂಬಲ ಯೋಜನೆಯಡಿ ಜೋಳ, ರಾಗಿ, ಕಿರುಧಾನ್ಯಗಳ ಖರೀದಿ
Purchase of jowar, ragi, and small grains under the Minimum Support Scheme
ಕನಿಷ್ಠ ಬೆಂಬಲ ಯೋಜನೆಯಡಿ ಜೋಳ, ರಾಗಿ, ಕಿರುಧಾನ್ಯಗಳ ಖರೀದಿ
ಬಳ್ಳಾರಿ 15: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬೆಳೆದ ಕಿರು ಸಿರಿಧಾನ್ಯಗಳಾದ ಸಾಮೆ/ನವಣೆ, ರಾಗಿ, ಜೋಳ ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿ ಆದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆಯಡಿ ಕಿರು ಸಿರಿಧಾನ್ಯ ಸಾಮೆ/ನವಣೆ, ರಾಗಿ, ಜೋಳ ಉತ್ಪನ್ನಗಳನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನಂತರ ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ, ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಲು ನೋಂದಾಯಿಸಿಕೊಳ್ಳಬೇಕು.
ಬೆಲೆ(ಕ್ವಿಂಟಲ್ ಗೆ):
ಬಿಳಿಜೋಳ-ಹೈಬ್ರೀಡ್: ರೂ.3699
ಬಿಳಿಜೋಳ- ಮಾಲ್ದಂಡಿ: ರೂ.3749
ರಾಗಿ: ರೂ.4886
ಕಿರು ಸಿರಿಧಾನ್ಯ (ಸಾಮೆ ಮತ್ತು ನವಣೆ): ರೂ.4886 ನಿಗದಿಪಡಿಸಲಾಗಿದೆ.
ನೋಂದಣಿ ಮತ್ತು ಖರೀದಿ ಅವಧಿ:
ರಾಗಿ ಮತ್ತು ಕಿರು ಸಿರಿಧಾನ್ಯಗಳಿಗೆ ಡಿ.15 ರ ವರೆಗೆ ನೋಂದಣಿಗೆ ಅವಕಾಶವಿದ್ದು, 2026 ರ ಜನವರಿ 01 ರಿಂದ ಮಾರ್ಚ್ 31 ರ ವರೆಗೆ ಖರೀದಿಸಲಾಗುವುದು.
ಜೋಳ ಉತ್ಪನ್ನಕ್ಕೆ 2026ರ ಮಾರ್ಚ್ 31 ರ ವರೆಗೆ ನೋಂದಣಿಗೆ ಅವಕಾಶವಿದ್ದು, 2026 ರ ಜನವರಿ 01 ರಿಂದ ಏಪ್ರಿಲ್ 30 ರ ವರೆಗೆ ಖರೀದಿಸಲಾಗುವುದು.
ಖರೀದಿ ಕೇಂದ್ರಗಳ ವಿವರ:
ಬಳ್ಳಾರಿ ತಾಲ್ಲೂಕು: ಬಳ್ಳಾರಿ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ಮೋಕ, ಅಸುಂಡಿ, ರೂಪನಗೂಡಿ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
ಕುರುಗೋಡು: ಕುರುಗೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
*ಸಿರುಗುಪ್ಪ:* ಕೆ.ಬೆಳಗಲ್ಲು, ಕರೂರು, ಹಚ್ಚೋಳ್ಳಿ, ಬೂದುಗುಪ್ಪ, ಬಿ.ಎಂ.ಸೂಗೂರು, ತಾಳೂರು, ಮುದ್ದಟನೂರು, ಅರಳಿಗನೂರು ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
*ಕಂಪ್ಲಿ:* ಕಂಪ್ಲಿ ಮತ್ತು ಎಮ್ಮಿಗನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
*ಸಂಡೂರು:* ಸಂಡೂರು ಮತ್ತು ಚೋರನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.
*ನೋಂದಣಿ ಪ್ರಕ್ರಿಯೆ:*
ರೈತರು ನೋಂದಣಿಯನ್ನು ತಾಲ್ಲೂಕು ಮಟ್ಟದ ಮತ್ತು ಹೋಬಳಿ ಮಟ್ಟದ ಮೋಕ, ಹಚ್ಚೋಳ್ಳಿ, ಕರೂರು ಖರೀದಿ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಮಾಡಲಾಗುವುದು. ಖರೀದಿ ಕೇಂದ್ರಕ್ಕೆ ರೈತರು ಕೃಷಿ ಇಲಾಖೆಯಿಂದ ಪಡೆದಿರುವ ಫ್ರೂಟ್ಸ್ ಐ.ಡಿ (ರೈತರ ನೊಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ) ಮತ್ತು ಆಧಾರ್‌ನೊಂದಿಗೆ ನೋಂದಣಿ ಕೇಂದ್ರಕ್ಕೆ ಬರಬೇಕು.
ಬೆಂಬಲ ಬೆಲೆಗಾಗಿ ರೈತರನ್ನು ಪ್ರತ್ಯೇಕವಾಗಿ ನೋಂದಾಯಿಸದೆ ಕೇವಲ ಅವರ ಫ್ರೂಟ್ಸ್ ಐ.ಡಿ.ಯ ಮೂಲಕ ಖರೀದಿಗೆ ನೋಂದಾಯಿಸಲಾಗುವುದು. ಫ್ರೂಟ್ಸ್ ಐ.ಡಿಯನ್ನು ರೈತರಿಂದಲೇ ಪ್ರಸ್ತುತ ಸಾಲಿನ ಫ್ರೂಟ್ಸ್ ಐ.ಡಿ ಪಡೆಯಲಾಗುವುದು. ರೈತರ ಬಳಿ ಫ್ರೂಟ್ಸ್ ಐ.ಡಿ ಇಲ್ಲದಿದ್ದಲ್ಲಿ ಅಥವಾ ಅವರ ಫ್ರೂಟ್ಸ್ ಐ.ಡಿ ಮಾಹಿತಿ ಪರಿಷ್ಕರಿಸಲು ಕೃಷಿ ಇಲಾಖೆಗೆ ಸಂಪರ್ಕಿಸಬೇಕು.
ಪ್ರತಿಯೊಬ್ಬ ರೈತರ ಫ್ರೂಟ್ಸ್ ಐ.ಡಿ ನಮೂದಿಸಿದ ನಂತರ ಫ್ರೂಟ್ಸ್ ದತ್ತಾಂಶದಿಂದ ರೈತರ ಅಗತ್ಯ ಮಾಹಿತಿ ಲಭ್ಯವಾಗಲಿದೆ. ಮಾಹಿತಿಯಲ್ಲಿ ರೈತರ ಹೆಸರು, ವಿಳಾಸ, ಜಾತಿ, ವಯಸ್ಸು, ಮೊಬೈಲ್ ಸಂಖ್ಯೆ, ಜಮೀನು ಮತ್ತು ಬೆಳೆದಿರುವ ಬೆಳೆಯ ವಿವರಗಳು ಹಾಗೂ ರೈತರ ಬ್ಯಾಂಕ್ ಖಾತೆಯ ವಿವರಗಳು ಲಭ್ಯವಿರುತ್ತವೆ. ಹಾಗಾಗಿ ಪ್ರತ್ಯೇಕವಾಗಿ ಬೇರಾವುದೇ ದಾಖಲೆ ನೀಡುವ ಅವಶ್ಯಕತೆ ಇರುವುದಿಲ್ಲ.
ಫ್ರೂಟ್ಸ್ ದತ್ತಾಂಶದನ್ವಯ ರೈತರ ಬೆಳೆ ಸಮೀಕ್ಷೆ ವಿವರದಂತೆ ಬೆಳೆ ವಿಸ್ತೀರ್ಣಕ್ಕನುಗುಣವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಬಹುದಾದ ಗರಿಷ್ಠ ಪ್ರಮಾಣವನ್ನು ತೋರಿಸಲಾಗುವುದು. ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿದಾಗ ಅದೇ ಖರೀದಿ ಕೇಂದ್ರದಲ್ಲೇ ಖರೀದಿ ಮಾಡಿಕೊಳ್ಳಲಾಗುವುದು. ರೈತರು ಖರೀದಿ ವಿವರಗಳನ್ನು ಒಪ್ಪಿ ನಮೂದಿಸಿದ ನಂತರ ಸ್ವೀಕೃತಿಯನ್ನು ಮುದ್ರಿಸಿ ರೈತರಿಗೆ ನೀಡಲಾಗುವುದು. ರೈತರು ಭತ್ತ/ರಾಗಿ/ಜೋಳ ಸರಬರಾಜು ಮಾಡುವಾಗ ಎಫ್.ಎ.ಕ್ಯೂ ಗುಣಮಟ್ಟವನ್ನು ಪರೀಶೀಲಿಸಿ ಖರೀದಿಸಲಾಗುವುದು
*ರೈತರ ಖರೀದಿ ಮಿತಿ:*
ಜೋಳವನ್ನು ಪ್ರತಿ ರೈತರಿಂದ ಪ್ರತಿ ಎಕರೆಗೆ 15 ಕ್ವಿಂಟಾಲ್ ನಂತೆ ಗರಿಷ್ಠ 150 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುವುದು. ರಾಗಿಯನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಠ 50 ಕ್ವಿಂಟಲ್ ಮೀರದಂತೆ ಖರೀದಿಸಲಾಗುವುದು.
ಕಿರು ಸಿರಿಧ್ಯಾನ (ಸಾಮೆ ಮತ್ತು ನವಣೆ) ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಲ್ ನಂತೆ ಗರಿಷ್ಠ 50 ಕ್ವಿಂಟಾಲ್ ಮೀರದಂತೆ ಖರೀದಿಸಲಾಗವುದು.
*ಹಣ ಪಾವತಿ:*
ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ ಸರಬರಾಜು ಮಾಡಿದ ರೈತರಿಗೆ ಅವರು ಕೃಷಿ ಇಲಾಖೆಯಲ್ಲಿ ನೋಂದಾಯಿಸಿಕೊಂಡಿರುವ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಹಣ ಪಾವತಿಸಲಾಗುವುದು.
*ದಲ್ಲಾಳಿ/ಏಜೆಂಟರ್‌ಗಳಿಗೆ ಎಚ್ಚರಿಕೆ:*
ಮಧ್ಯವರ್ತಿಗಳು, ಏಜೆಂಟರ್‌ಗಳು ಖರೀದಿ ಕೇಂದ್ರಗಳಿಗೆ ರಾಗಿ, ಜೋಳವನ್ನು ತಂದಲ್ಲಿ ಅಂತಹವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ಮೊ.8867271187, 974056703 ಮತ್ತು ಬಳ್ಳಾರಿ ಮೊ.9008841654, ಕಂಪ್ಲಿ ಮೊ.9986266823, ಸಿರುಗುಪ್ಪ ಮೊ.7259598625, ಕುರುಗೋಡು ಮೊ.8951307333, ಸಂಡೂರು ಮೊ.9980676497 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಕ್ಕಳನ್ನು ದೇಶದ ಭವಿಷ್ಯದ ಶಿಲ್ಪಿಗಳಾಗಿ ಮಾಡುವುದು ಎಲ್ಲರ ಕರ್ತವ್ಯ: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ,ನ.15(ಕರ್ನಾಟಕ ವಾರ್ತೆ):
ಮಕ್ಕಳನ್ನು ದೇಶದ ಭವಿಷ್ಯದ ಶಿಲ್ಪಿಗಳಾಗಿ ಮಾಡುವುದು ಪೋಷಕರು, ಶಿಕ್ಷಕರು ಮತ್ತು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಪ್ರಯುಕ್ತ ನಗರದ ಕಂಟೋನ್ ಮೆಂಟ್ ನ ಪ್ರದೇಶದ ಶಾಂತಿಧಾಮ ಆವರಣದಲ್ಲಿ ಶನಿವಾರ ಏರಿ್ಡಸಿದ್ದ ಮಕ್ಕಳ ದಿನಾಚರಣೆ ಮತ್ತು ನಾಮಕರಣ ಶಾಸ್ತ್ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜವಾಹರಲಾಲ್ ನೆಹರು ಅವರ ಜನ್ಮದಿನದ ಸವಿನೆನಪಿಗಾಗಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ. ದೇಶದ ಪ್ರತಿ ಮಗುವಿಗೂ ಪ್ರೀತಿ, ಸುರಕ್ಷತೆ, ಶಿಕ್ಷಣ ನೀಡುವುದು ಮಕ್ಕಳ ದಿನಾಚರಣೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳು ಹೂಗಳಿದ್ದಂತೆ, ಅವುಗಳನ್ನು ಬಾಡದಂತೆ ನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರು ಮಾತನಾಡಿ, ಮಕ್ಕಳು ಮುಕ್ತವಾಗಿ, ಆತ್ಮವಿಶ್ವಾಸದಿಂದ ಬೆಳೆಯಲು ಮತ್ತು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಪ್ರೋತ್ಸಾಹಿಸಬೇಕು. ಪ್ರತಿಯೊಂದು ಮಗುವೂ ಕಲಿಯಲು, ಬೆಳೆಯಲು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಮೂಲ್ಯ (ಜಿ) ವಿಶೇಷ ದತ್ತು ಸಂಸ್ಥೆಯ ಒಂದು ತಿಂಗಳ ಗಂಡು ಮಗುವಿಗೆ ನಾಮಕರಣ ಶಾಸ್ತ್ರ ಮಾಡಲಾಯಿತು. ನಂತರ ಸರ್ಕಾರಿ ಬಾಲಕರ, ಬಾಲಕಿಯರ ಸಂಸ್ಥೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಸಂಸ್ಥೆಯಲ್ಲಿರುವ ಮಕ್ಕಳಿಗೆ ಕ್ರೀಡಾಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಚಟುವಟಿಕೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ, ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರುಗಳಾದ ಚಟ್ಲ ವೆಂಕಟೇಶ್, ಎಫ್.ಗೌಸಿಯಾ, ಮಕ್ಕಳ ಪಾಲನಾ ಸಂಸ್ಥೆಯ ಅಧೀಕ್ಷಕರುಗಳಾದ ನಾಗವೇಣಿ, ಗುರುಬಸವರಾಜ್ ಹೆಚ್.ಡಿ., ಬಿ.ಹುಲುಗಪ್ಪ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿ-ಸಿಬ್ಬಂದಿಗಳು ಹಾಗೂ ಸಂಸ್ಥೆಯ ಮಕ್ಕಳು ಉಪಸ್ಥಿತರಿದ್ದರು.
ಮಕ್ಕಳ ರಕ್ಷಣಾಧಿಕಾರಿ (ಸಾಂಸ್ಥಿಕ ಸೇವೆ) ದೊಡ್ಡನಗೌಡ ಮಂಜುನಾಥ ನಿರೂಪಿಸಿದರು.
ಬಳ್ಳಾರಿ ಮಹಾನಗರ ಪಾಲಿಕೆ: ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ಅಭ್ಯರ್ಥಿ ಆಯ್ಕೆ
ಬಳ್ಳಾರಿ,ನ.15): ಬಳ್ಳಾರಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ಶನಿವಾರ ಚುನಾವಣೆ ಸುಸೂತ್ರವಾಗಿ ನಡೆದಿದೆ.
ಮೇಯರ್ ಆಗಿ ಪಿ.ಗಾದೆಪ್ಪ, ಉಪಮೇಯರ್ ಆಗಿ ಮುಬಿನಾ.ಬಿ ಅವರು ಆಯ್ಕೆಗೊಂಡಿದ್ದಾರೆ. *ಸ್ಥಾತಿ ಸಮಿತಿ ಸ್ಥಾನಗಳ ಚುನಾವಣೆ:*
*ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ:*
ವಿ.ಕುಬೇರ(ವಾರ್ಡ್ ಸಂ.38), ಎಂ.ನಂದೀಶ್(ವಾರ್ಡ್ ಸಂ.18), ಹೆಚ್.ರಾಜಶೇಖರ್(ವಾರ್ಡ್ ಸಂ.05), ನೂರ್ ಮೊಹಮ್ಮದ್(ವಾರ್ಡ್ ಸಂ.15), ಶ್ವೇತಾ.ಬಿ(ವಾರ್ಡ್ ಸಂ.31), ಎನ್.ಎಂ.ಡಿ.ಆಸೀಫ್ ಭಾಷಾ(ವಾರ್ಡ್ ಸಂ.30), ಬಿ.ರತ್ನಮ್ಮ(ವಾರ್ಡ್ ಸಂ.14).
*ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ:*
ಪಿ.ವಿವೇಕ್(ವಾರ್ಡ್ ಸಂ.20), ಶಶಿಕಳಾ ಪಿ.ಜಗನ್ನಾಥ್(ವಾರ್ಡ್ ಸಂ.39), ಜಿ.ಶಿಲ್ಪ(ವಾರ್ಡ್ ಸಂ.29), ಬಿ.ಜಾನಕಿ(ವಾರ್ಡ್ ಸಂ.33), ಜಬ್ಬರ್ ಸಾಬ್(ವಾರ್ಡ್ ಸಂ.09), ಎಂ.ರಾಜೇಶ್ವರಿ(ವಾರ್ಡ್ ಸಂ.34), ಉಮಾದೇವಿ ಶಿವರಾಜ್(ವಾರ್ಡ್ ಸಂ.07).
*ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ:*
ಮಾಲನ್ ಬೀ(ವಾರ್ಡ್ ಸಂ.37), ಕವಿತ.ಕೆ.ಹೊನ್ನಪ್ಪ(ವಾರ್ಡ್ ಸಂ.17), ಡಿ.ತ್ರಿವೇಣಿ(ವಾರ್ಡ್ ಸಂ.04), ನಿಯಾಜ್ ಅಹ್ಮದ್.ಟಿ(ವಾರ್ಡ್ ಸಂ.27), ಕೆ.ಮಂಜುಳಾ(ವಾರ್ಡ್ ಸಂ.32), ಎಂ.ಕೆ.ಪದ್ಮರೋಜ(ವಾರ್ಡ್ ಸಂ.06), ಬಿ.ಜಾನಕಿ(ವಾರ್ಡ್ ಸಂ.33).
*ಲೆಕ್ಕ ಪತ್ರಗಳ ಸ್ಥಾಯಿ ಸಮಿತಿ:*
ಹನುಮಂತ.ಕೆ(ವಾರ್ಡ್ ಸಂ.22), ಹನುಮಂತ.ಜಿ(ವಾರ್ಡ್ ಸಂ.01), ಟಿ.ಶ್ರೀನಿವಾಸ ಮೋತ್ಕರ್(ವಾರ್ಡ್ ಸಂ.24), ನಾಗರತ್ನ(ವಾರ್ಡ್ ಸಂ.16), ಎನ್.ಗೋವಿಂದರಾಜುಲು(ವಾರ್ಡ್ ಸಂ.11), ಕೆ.ಎ.ಚೇತನ ವೇಮಣ್ಣ(ವಾರ್ಡ್ ಸಂ.12), ಎಸ್.ಸುರೇಖಾ ಮಲ್ಲನಗೌಡ(ವಾರ್ಡ್ ಸಂ.21) ಇವರುಗಳು ಆಯ್ಕೆಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 