ಶಿವಾಜಿನಗರ ತಾಂಡಾದಲ್ಲಿ 5 ವರ್ಷಗಳಿಂದ ಸ್ಥಗಿತಗೊಂಡ ಶುದ್ಧ ಕುಡಿಯುವ ನೀರಿನ ಘಟಕ; ತಕ್ಷಣ ದುರಸ್ತಿಗೆ ಗ್ರಾಮಸ್ಥರ ಆಗ್ರಹ
Pure drinking water unit at Shivajinagar Tanda non-functional for five years; villagers demand immed
ಗದಗ 13: ಶಿರಹಟ್ಟಿ ತಾಲೂಕಿನ ಶಿವಾಜಿನಗರ (ಮಜ್ಜೂರ) ತಾಂಡಾದಲ್ಲಿ ಕಳೆದ ಸುಮಾರು ಐದು ವರ್ಷಗಳಿಂದ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿ ಮಾಡಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ವಕೀಲ ರವಿಕಾಂತ ಅಂಗಡಿ ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ವಕೀಲ ರವಿಕಾಂತ ಅಂಗಡಿ, ಶಿವಾಜಿನಗರ ತಾಂಡಾದಲ್ಲಿ ಸುಮಾರು 550 ಮನೆಗಳಿದ್ದು, 2,500ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಆದರೆ ಗ್ರಾಮದಲ್ಲಿ ಸಮರ್ಕ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಕಾರಣ ಜನರು ಕೊಳವೆಬಾವಿ ನೀರನ್ನೇ ಅವಲಂಬಿಸಿದ್ದಾರೆ. ಈ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಿರುವುದರಿಂದ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ ಎಂದು ತಿಳಿಸಿದರು.
ಗ್ರಾಮದಲ್ಲಿರುವ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸದೆ ಬಂದ್ ಆಗಿವೆ. ಈ ಕುರಿತು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಎರಡೂ ನೀರಿನ ಘಟಕಗಳನ್ನು ಕೂಡಲೇ ದುರಸ್ತಿ ಮಾಡಿ ಬಳಕೆಗೆ ಮುಕ್ತಗೊಳಿಸಬೇಕು. ಇಲ್ಲವಾದಲ್ಲಿ ಗ್ರಾಮಸ್ಥರೊಂದಿಗೆ ಕಾನೂನುಬದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದೇ ವೇಳೆ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ಬರ ಘೋಷಣೆ ಮಾಡಿ ರೈತರ ಹಿತ ಕಾಪಾಡಬೇಕು. ಜುಲೈ 15ರೊಳಗೆ ಬೆಳೆ ವಿಮೆ ಪಾವತಿಸಲು ರೈತರು ಸಮೀಪದ ಸಿಎಸ್ಸಿ ಕೇಂದ್ರಗಳಿಗೆ ತೆರಳುವಂತೆ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು, ಜಿಲ್ಲಾ ಪಂಚಾಯಿತಿ ಡಿಎಸ್ ಹಾಗೂ ಎಂಜಿನಿಯರ್ಗಳೊಂದಿಗೆ ಚರ್ಚಿಸಿ ಇನ್ನೆರಡು ದಿನಗಳಲ್ಲಿ ಶಿವಾಜಿನಗರ ತಾಂಡಾದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡುವ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬರ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಹಾಗೂ ಬೆಳೆ ವಿಮೆ ಪಾವತಿ ಕುರಿತು ರೈತರಿಗೆ ಮಾಹಿತಿ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಗಣೇಶ್ ಚನ್ನಪ್ಪ ಲಮಾಣಿ, ಭಾಪೂಜಿ ಯಂಕಪ್ಪ ಲಮಾಣಿ, ಪ್ರಕಾಶ ಈಶ್ವರ ಲಮಾಣಿ, ತುಕಾರಾಮ ಈರ್ಪ ಲಮಾಣಿ, ಕೇಶಪ್ಪ ಹೇಮಲಪ್ಪ ಲಮಾಣಿ ಸೇರಿದಂತೆ ಶಿವಾಜಿನಗರ ತಾಂಡಾದ ಗ್ರಾಮಸ್ಥರು ಉಪಸ್ಥಿತರಿದ್ದರು.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 