ಕೋಳಿಗಳ ಮೇಲೆ ದಾಳಿ ನಡೆಸಲು ಬಂದ ಹೆಬ್ಬಾವು ರಕ್ಷಣೆ
Python attacks chickens, rescued
ಲೋಕದರ್ಶನ ವರದಿ
ಮುಂಡಗೋಡ 19 : ತಾಲೂಕಿನ ಕೊಪ್ಪ ಗ್ರಾಮದ ನಿವಾಸಿ ಜಾರ್ಜ್ ರೋಹಿ ಪಾರಲ್ ಅವರ ಮನೆಯ ಕಾಂಪೌಂಡ್ ಒಳಗೆ ಬುಧವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ದೊಡ್ಡ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿಯ ಪ್ರಕಾರ, ಮನೆಯಲ್ಲಿದ್ದ ಕೋಳಿಗಳನ್ನು ಬೇಟೆಯಾಡುವ ಉದ್ದೇಶದಿಂದ ಹೆಬ್ಬಾವು ಕಾಂಪೌಂಡ್ ಒಳಗೆ ಪ್ರವೇಶಿಸಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಕೋಳಿಗಳನ್ನು ಹಿಡಿದು ನುಂಗುವ ಸ್ಥಿತಿಯಲ್ಲಿತ್ತು.
ಇದನ್ನು ಗಮನಿಸಿದ ಮನೆಯ ಸದಸ್ಯರು ಭಯಭೀತರಾಗಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕಾಗಮಿಸಿದ ಹಳ್ಳಿ ಗಸ್ತು ಅರಣ್ಯ ಪಾಲಕರಾದ ಮುತ್ತುರಾಜ ಅವರು ಹೆಬ್ಬಾವನ್ನು ಸುರಕ್ಷಿತವಾಗಿ ರಕ್ಷಿಸಿ, ನಂತರ ಸೂಕ್ತವಾದ ನೈಸರ್ಗಿಕ ಆವಾಸಸ್ಥಾನಕ್ಕೆ ಬಿಟ್ಟಿದ್ದಾರೆ. ಈ ರಕ್ಷಣಾ ಕಾರ್ಯಾಚರಣೆಯಲ್ಲಿ ನಿಶಿಮೇಶ್ವರ ವಾಲ್ಮೀಕಿ, ಊರ ನಾಗರಿಕರಾದ ಮಹೇಶ ರಾಮಣ್ಣ ಸುನಗಾರ್ ಹಾಗೂ ಇತರರು ಸಹಕರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 