ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ; ನೂತನ ಶಾಲೆ, ಅಂಗನವಾಡಿ ಕಟ್ಟಡ ಲೋಕಾರೆ್ಣ
Quality education for rural children; new school and Anganwadi buildings inaugurated
ಬೆಳಗಾವಿ, ಆ. 11: ಲೋಕಸಭಾ ಕ್ಷೇತ್ರದ ಇನಾಂ ಬಡಸ್ ಗ್ರಾಮದಲ್ಲಿ ಒಟ್ಟು ?61 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸರ್ಕಾರಿ ಮರಾಠಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ಮಂಗಳವಾರ ಸಾರ್ವಜನಿಕ ಸೇವೆಗೆ ಲೋಕಾರೆ್ಣ ಮಾಡಲಾಯಿತು.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ?42 ಲಕ್ಷ ವೆಚ್ಚದಲ್ಲಿ ಸರ್ಕಾರಿ ಮರಾಠಿ ಪೂರ್ವ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಿಸಲಾಗಿದೆ. ಇದೇ ವೇಳೆ ?19 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಅಂಗನವಾಡಿ ಕಟ್ಟಡವನ್ನೂ ನಿರ್ಮಿಸಲಾಗಿದ್ದು, ಎರಡೂ ಕಟ್ಟಡಗಳ ಉದ್ಘಾಟನೆಯ ಮೂಲಕ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ರಿಬ್ಬನ್ ಕತ್ತರಿಸುವ ಮೂಲಕ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಸಮರ್ಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೃಣಾಲ್ ಹೆಬ್ಬಾಳ್ಕರ್, ಗ್ರಾಮೀಣ ಪ್ರದೇಶದ ಮಕ್ಕಳಿಗೂ ನಗರ ಪ್ರದೇಶದ ಮಕ್ಕಳಿಗೆ ದೊರೆಯುವಂತೆಯೇ ಗುಣಮಟ್ಟದ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಉತ್ತಮ ವಾತಾವರಣ ಕಲ್ಪಿಸುವಲ್ಲಿ ನೂತನ ಶಾಲಾ ಕಟ್ಟಡ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಶಯದಂತೆ ಗ್ರಾಮೀಣ ಭಾಗದಲ್ಲಿ ಶಿಕ್ಷಣ, ಮಕ್ಕಳ ಆರೈಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಪೂರ್ವ ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವುದು ಅಗತ್ಯವಾಗಿದ್ದು, ಇನಾಂ ಬಡಸ್ನಲ್ಲಿ ನಿರ್ಮಿಸಲಾದ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ ಎಂದು ಅವರು ತಿಳಿಸಿದರು.
ನೂತನ ಕಟ್ಟಡಗಳಿಂದ ಗ್ರಾಮದ ಮಕ್ಕಳು ಸುರಕ್ಷಿತ ಹಾಗೂ ಉತ್ತಮ ವಾತಾವರಣದಲ್ಲಿ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ. ಅಂಗನವಾಡಿ ಕೇಂದ್ರದ ಮೂಲಕ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಸಾಧ್ಯವಾಗಲಿದೆ. ಇದರಿಂದ ಮಕ್ಕಳ ಸಮಗ್ರ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದು ಸ್ಥಳೀಯರು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳು ದೇಸೂರಕರ್, ಮುಖಂಡರಾದ ಮನೋಹರ ಬೆಳಗಾಂವ್ಕರ್, ನಾರಾಯಣ ಕಾಂಬಳೆ, ಗಿತೇಶ್ ತಾನಾಬಿ, ದುರ್ಗಪ್ಪ ಪಾಟೀಲ, ದತ್ತು ಪಾಟೀಲ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ-ಕಿರಿಯ ನಾಯಕರು, ಕಾರ್ಯಕರ್ತರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ನೂತನ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಮಕ್ಕಳ ಶಿಕ್ಷಣ ಮತ್ತು ಮೂಲಸೌಕರ್ಯಕ್ಕೆ ಆದ್ಯತೆ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 