ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಟಿ.ಜೆ.ದಾನಿ
Quality education for students in government schools: T.J. Dani
ಯಲಬುರ್ಗಾ 01: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ತಾಲೂಕಾ ಅಕ್ಷರ ದಾಸೋಹ ಸಹಾಯಕ ನಿದೇಶಕ ಟಿ.ಜೆ.ದಾನಿ ಮನವಿ ಮಾಡಿದರು.
ತಾಲೂಕಿನ ಸಂಗನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದ ಜತೆಗೆ ವಾರದ 6 ದಿನವೂ ಮೊಟ್ಟೆ, ಬಾಳೆಹಣ್ಣು, ರಾಗಿ ಮಾಲ್ಟ್ ನೀಡಲಾಗುತ್ತಿದೆ. ಪಠ್ಯಪುಸ್ತಕ, ಶೂ, ಸಾಕ್ಸ್, ವಿದ್ಯಾರ್ಥಿ ವೇತನವನ್ನು ಉಚಿತ ನೀಡಲಾಗುತ್ತಿದೆ. ಹಲವು ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಅನುಭವಿ ಶಿಕ್ಷಕರಿದ್ದು, ಉತ್ತಮ ಗುಣಮಟ್ಟದ ಶಾಲಾ ಕೊಠಡಿಗಳು, ಶೌಚಾಲಯ, ಆಟದ ಮೈದಾನ ಸೇರಿದಂತೆ ಮೂಲ ಸೌಕರ್ಯಗಳಿವೆ ಅದ್ದರಿಂದ ಪಾಲಕರು ತಮ್ಮ ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಳ್ಳುವ ಮೂಲಕ ಉತ್ತಮ ಪ್ರಜೆಯನ್ನಾಗಿಸುವಂತೆ ಸಲಹೆ ನೀಡಿದರು. ನಂತರ ಮುಖ್ಯೋಪಾಧ್ಯಯ ಶರಣಯ್ಯ ಸರಗಣಾಚಾರ ಮಾತನಾಡಿ,ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ನಮ್ಮ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಒಳ್ಳೆಯ ಶಿಕ್ಷಣ ಸಿಗುತ್ತಿದೆ. ಮಕ್ಕಳ ಶೈಕ್ಷಣಿಕ ಸುಧಾರಣೆಗಾಗಿ ಬಿಸಿಯೂಟ, ಪಠ್ಯಪುಸ್ತಕ, ಶ್ಯೂ.ಸಮವಸ್ತ ಸೇರಿ ಇನ್ನಿತರ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದೆ.ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಕ್ಕಳೊಂದಿಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಜೆ.ದಾನಿ ಸೇರಿ ಶಿಕ್ಷಕ ವರ್ಗದವರು ಸಿಹಿ ಊಟವನ್ನು ಮಾಡಿದರು.ಈ ಸಂದರ್ಭದಲ್ಲಿ ಸಂಗಪ್ಪ ಶ್ಯಾಗೋಟಿ,ಉಮೇಶ ಕೊಳೂರು,ಮಂಜುನಾಥ ಬೂದಿಹಾಳ,ಮೀನಾಕ್ಷಮ್ಮ,ಗೀತಾ ಸೊರಟೂರ ಸೇರಿ ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 