ಉತ್ತಮ ಸಮಾಜದ ಬೆಳವಣಿಗೆಗೆ ಉತ್ತಮ ಶಿಕ್ಷಣ ಮುಖ್ಯ: ಯಶವಂತರಾಯಗೌಡ ಪಾಟೀಲ

ಉತ್ತಮ ಸಮಾಜದ ಬೆಳವಣಿಗೆಗೆ ಉತ್ತಮ ಶಿಕ್ಷಣ ಮುಖ್ಯ: ಯಶವಂತರಾಯಗೌಡ ಪಾಟೀಲ  Quality education is essential for the development of a good society: Yashvantharayagouda Patil


ಝಳಕಿ 22 : ಇಂಡಿ ತಾಲ್ಲೂಕಿನ ಝಳಕಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ 2026-27ನೇ ಸಾಲಿನ ಸಂಸ್ಕೃತಿ, ಕ್ರೀಡೆ, ಎನ್‌ಎಸ್‌ಎಸ್, ರೆಡ್ಕ್ರಾಸ್, ಸ್ಕೌಟ್ ಸೇರಿದಂತೆ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ಯುವಕರು ಮತ್ತು ಶಿಕ್ಷಣ ಅತ್ಯಗತ್ಯ ಎಂದು ಹೇಳಿದರು. ಶಿಕ್ಷಣದ ಜೊತೆಗೆ ಸಂಸ್ಕೃತಿ, ಸೌಜನ್ಯ ಹಾಗೂ ಕ್ರೀಡೆಗೂ ಮಹತ್ವ ನೀಡಬೇಕು. ಶಿಕ್ಷಣದಿಂದ ಬುದ್ಧಿವಂತಿಕೆ, ಕ್ರೀಡೆಯಿಂದ ಉತ್ತಮ ಆರೋಗ್ಯ ದೊರೆಯುತ್ತದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.