ರಾಜಸ್ಥಾನ 19: ಜಮೀನು ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆಯಲ್ಲಿ ಸೋದರಳಿಯ ತನ್ನ ಚಿಕ್ಕಮ್ಮನ ಮೂಗನ್ನೇ ಕತ್ತರಿಸಿದ ಘಟನೆಯೊಂದು ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಜಲೋರ್ನ ಸೈಲಾ ಮೂಲದ ಕುಕಿ ದೇವಿ ಎನ್ನಲಾಗಿದೆ.
ಜಮೀನಿನ ವಿಚಾರವಾಗಿ ಸಂಬಂಧಿಕರ ನಡುವೆ ಆಗಾಗ ಜಗಳಗಳು ನಡೆಯುತಿತ್ತು, ಒಂದು ದಿನ ಅದೇ ಜಮೀನು ವಿಚಾರವಾಗಿ ಜಗಳ ಶುರುವಾಗಿ, ಗಂಭೀರ ಹಂತಕ್ಕೆ ತಲುಪಿ ಕುಕಿ ದೇವಿಯ ಸೋದರಳಿಯ ಓಂ ಪ್ರಕಾಶ್ ತನ್ನ ಕೈಯಲ್ಲಿದ್ದ ಚಾಕುವಿನಿಂದ ಕುಕಿ ದೇವಿಯ ಮೂಗನ್ನು ಕತ್ತರಿಸಿದ್ದಾನೆ, ಈ ವೇಳೆ ಮೂಗಿನ ಭಾಗ ತುಂಡಾಗಿ ನೆಲಕ್ಕೆ ಬಿದ್ದಿದ್ದು ರಕ್ತ ಹರಿಯತೊಡಗಿದೆ, ಕೂಡಲೇ ಕುಕಿ ದೇವಿ ತುಂಡಾದ ಮೂಗನ್ನು ಹೆಕ್ಕಿ ತನ್ನ ಬ್ಯಾಗ್ ಒಳಗೆ ಇಟ್ಟು ಪಾಲಿಯಲ್ಲಿರುವ ಬಂಗಾರ್ ಆಸ್ಪತ್ರೆಗೆ ಓಡೋಡಿ ಬಂದಿದ್ದಾಳೆ.
ಬಂಗಾರ್ ಆಸ್ಪತ್ರೆಯ ಡಾ.ಜುಗಲ್ ಮಹೇಶ್ವರಿ ಒಮ್ಮೆ ಪ್ರಾಥಮಿಕ ಚಿಕಿತ್ಸೆ ನೀಡಿ ಪ್ಲಾಸ್ಟಿಕ್ ಸರ್ಜರಿ ಮೂಲಕ ಮಾತ್ರ ಅದನ್ನು ಮರು ಜೋಡಿಸಲು ಸಾಧ್ಯ ಎಂದು ಹೇಳಿ ಜೋಧ್‌ಪುರದ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ, ಸದ್ಯ ಕುಕಿ ದೇವಿಗೆ ಜೋಧ್‌ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು ಅಪಾಯದಿಂದ ಪಾರಾಗಿದ್ದಾಳೆ.
ಓಂ ಪ್ರಕಾಶ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ,