ಸಿದ್ಧಾರ್ಥ ನಗರದಲ್ಲಿ ಮೂಲಸೌಕರ್ಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಶಾಸಕ ನಾರಾ ಭರತ್ ರೆಡ್ಡಿ
Quick solution to infrastructure problems in Siddhartha Nagar: MLA Nara Bharat Reddy
ಬಳ್ಳಾರಿ 14 : ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಅವರು ನಗರದ 21ನೇ ವಾರ್ಡ್ ವ್ಯಾಪ್ತಿಯ ಸಿದ್ಧಾರ್ಥ ನಗರ ಜನವಸತಿ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಪರೀಶೀಲಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಬಹುಕಾಲದಿಂದ ಮೂಲಭೂತ ಸೌಕರ್ಯಗಳ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದರು. ಕೆಲವು ಬೀದಿಗಳಲ್ಲಿ ರಸ್ತೆ ಹದಗೆಟ್ಟಿದ್ದು, ಮಳೆಯ ಸಮಯದಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹಲವೆಡೆ ಕುಡಿಯುವ ನೀರಿನ ಸರಬರಾಜು ಸಮರ್ಕವಾಗಿಲ್ಲದೆ ನಿವಾಸಿಗಳು ಪರದಾಡುತ್ತಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಭರತ್ ರೆಡ್ಡಿ, ಜನವಸತಿ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸುವುದು ಆಡಳಿತದ ಆದ್ಯತೆಯಾಗಿದೆ.
ರಸ್ತೆ ದುರಸ್ತಿ, ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆ, ವಿದ್ಯುತ್ ಕಂಬಗಳಿಗೆ ಸಂಪರ್ಕ ಕಲ್ಪಿಸುವುದು ಹಾಗೂ ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಶೀಘ್ರ ಆರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ನೈರ್ಮಲ್ಯ ಸಮಸ್ಯೆಗಳ ಕುರಿತು ವಿಶೇಷ ಗಮನ ಹರಿಸುವಂತೆ ಸೂಚಿಸಿದ ಅವರು, ಒಳಚರಂಡಿ ಹಾಗೂ ಕಸದ ವಿಲೇವಾರಿ ವ್ಯವಸ್ಥೆಯನ್ನು ಸಮರ್ಕವಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಹಂತ ಹಂತವಾಗಿ ಎಲ್ಲಾ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಚಾನಾಳ್ ಶೇಖರ್, ಪಂಪಯ್ಯ ಹಿರೇಮಠ್, ಸೋಮಣ್ಣ, ಪರಶುರಾಮು, ವಿಜಯಲಕ್ಷ್ಮೀ, ಶೇಖರ್, ಶಾಮ್, ವಾಣಿ, ಪಂಪಣ್ಣ, ಪರುಶುರಾಮುಡು, ಹೊನ್ನಪ್ಪ ಉಪಸ್ಥಿತರಿದ್ದರು. ಅಧಿಕಾರಿಗಳಾದ ವೀರೇಶ್, ಶಿವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯೂ ಭೇಟಿ ಈ ವೇಳೆ ಭಾಗವಹಿಸಿದ್ದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 