ಕ್ವಿಟ್ ಇಂಡಿಯಾ ಚಳವಳಿ: ಹೊಸಮಠದಲ್ಲಿ ಅರ್ಥಪೂರ್ಣ ಕಾರ್ಯಕ್ರಮ
Quit India Movement: Meaningful program at Hosamatha
ಲೋಕದರ್ಶನ ವರದಿ
ಹಾವೇರಿ 10: ಜಾತಿ, ಧರ್ಮ, ವಯಸ್ಸಿನ ಹಂಗು ಮೀರಿ ಕ್ವಿಟ್ ಇಂಡಿಯಾ ಚಳವಳಿಯ ಕಿಚ್ಚು ದೇಶದ ಪ್ರತಿಯೊಬ್ಬ ಪ್ರಜೆಯಲ್ಲೂ ಹೋರಾಟದ ಉತ್ಸಾಹ ಮೂಡಿಸಿತ್ತು ಎಂದು ಹೊಸಮಠದ ಶ್ರೀ ಬಸವ ಶಾಂತಲಿಂಗ ಮಹಾಸ್ವಾಮೀಜಿ ಹೇಳಿದರು.
ನಗರದ ಹೊಸಮಠದ ಆವರಣದಲ್ಲಿ ಬಸವ ಕೇಂದ್ರ ಶ್ರೀ ಹೊಸಮಠ, ಹಾವೇರಿ ಹಾಗೂ ಅರಳಿಕಟ್ಟಿ ಪ್ರಕಾಶನದ ಆಶ್ರಯದಲ್ಲಿ ನಡೆದ ಕ್ವಿಟ್ ಇಂಡಿಯಾ ದಿನಾಚರಣೆ ಹಾಗೂ ಹಾವೇರಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕ್ವಿಟ್ ಇಂಡಿಯಾ ಚಳವಳಿ ಕೇವಲ ರಾಜಕೀಯ ಹೋರಾಟವಾಗಿರದೆ, ದೇಶದ ಪ್ರತಿಯೊಬ್ಬ ಪ್ರಜೆಯೂ ಬೀದಿಗಿಳಿದು ಹೋರಾಡುವ ಶಕ್ತಿ ತುಂಬಿದ ಐತಿಹಾಸಿಕ ಕ್ರಾಂತಿಯಾಗಿತ್ತು. ಮೊದಲ ಹಂತದ ನಾಯಕರು ಜೈಲು ಪಾಲಾಗುತ್ತಿದ್ದಂತೆ, ಎರಡನೇ ಹಂತದ ನಾಯಕರು ಹೋರಾಟವನ್ನು ಮುನ್ನಡೆಸಿದರು. ಈ ಐತಿಹಾಸಿಕ ಕ್ರಾಂತಿಯಲ್ಲಿ ಹಾವೇರಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರೂ ಮಹತ್ವದ ಪಾತ್ರ ವಹಿಸಿರುವುದು ಹೆಮ್ಮೆಯ ಸಂಗತಿ ಎಂದರು.
ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಧ್ಯಾಪಕ ಪ್ರೇಮಾನಂದ ಲಕ್ಕಣ್ಣವರ ಮಾತನಾಡಿ, ಕ್ವಿಟ್ ಇಂಡಿಯಾ ಚಳವಳಿಯ ಸಂದರ್ಭದಲ್ಲಿ ‘ದೇಶ ನಮ್ಮದು, ಎಲ್ಲರೂ ನಮ್ಮವರು’ ಎಂಬ ಭಾವನೆ ಜನರಲ್ಲಿ ಬಲವಾಗಿತ್ತು. ಇಂದಿನ ಸಮಾಜದಲ್ಲಿ ಎಲ್ಲರೂ ಸ್ವಾರ್ಥಿಗಳಾಗುತ್ತಿರುವ ಸಂದರ್ಭದಲ್ಲಿ ಐತಿಹಾಸಿಕ ಪ್ರಜ್ಞೆಯೊಂದಿಗೆ ಪ್ರಾಮಾಣಿಕ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು. ವೈಚಾರಿಕ ಪ್ರಜ್ಞೆಯ ಹಾದಿಯಲ್ಲಿ ಸಾಗುವಾಗ ನಮ್ಮತನವನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು.
ನಿವೃತ್ತ ಶಿಕ್ಷಕ ಹನುಮಂತಗೌಡ ಗೊಲ್ಲೇರ ಮಾತನಾಡಿ, ಮಹಾತ್ಮ ಗಾಂಧೀಜಿಯವರ ‘ಮಾಡು ಇಲ್ಲವೇ ಮಡಿ’ ಕರೆ ದೇಶದ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸಿತ್ತು. ಭಾರತವನ್ನು ತೊರೆಯುವಂತೆ ಬ್ರಿಟಿಷರಿಗೆ ನೀಡಿದ ಈ ಕರೆ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ವೇಗ ನೀಡಿತು. ಹೋರಾಟವನ್ನು ಹತ್ತಿಕ್ಕಲು ಬ್ರಿಟಿಷ್ ಸರ್ಕಾರ ಯತ್ನಿಸಿದರೂ ದೇಶಭಕ್ತರ ಮುಂದೆ ಸೋಲೊಪ್ಪಿಕೊಳ್ಳಬೇಕಾಯಿತು ಎಂದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 