ರಸಪ್ರಶ್ನೆ ಸ್ಫರ್ಧೆ: ವಿಶ್ರೀಕೃ ವಿವಿಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
Quiz Competition: Prize distribution to students of Vishrikri University
ಬಳ್ಳಾರಿ 16: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಶ್ರೀಕೃವಿವಿಯ ಡಾ.ಬಿ.ಆರ್. ಅಂಬೇಡ್ಕರ್ ತರಬೇತಿ, ಸಂಶೋಧನಾ ಮತ್ತು ವಿಸ್ತರಣ ಕೇಂದ್ರವು ಇತ್ತೀಚೆಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಫರ್ಧೆ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ ನಗರದ ಮುನಿಸಿಪಲ್ ಮೈದಾನದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ ಜಯಂತಿಯಂದು ಕಾರ್ಯಕ್ರಮದಲ್ಲಿ ಶಾಸಕರಾದ ನಾರಾ ಭರತ್‌ರೆಡ್ಡಿ ಅವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಗೌರವಿಸಿದರು.ಲಿಡ್ಕರ್ ಅಧ್ಯಕ್ಷ ಮುಂಡರಿಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ವಿವಿಯ ವಿದ್ಯಾರ್ಥಿಗಳಾದ ಚರಣ್ ನಜರೆತ್, ಬಸವರಾಜ್ ಮತ್ತು ಕಾರ್ತಿಕ್ ಕೆ.ಬಿ. (ರಾಜ್ಯಶಾಸ್ತ್ರ) ಹಾಗೂ ಅನುಶ್ರೀ ಮತ್ತು ವಿಜಯಲಕ್ಷ್ಮಿ (ವಾಣಿಜ್ಯಶಾಸ್ತ್ರ) ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಕ್ಕಾಗಿ ಗೌರವಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 