ದಿವಂಗತ ಎಸ್.ಎಂ ಕೃಷ್ಣ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ನೀಡಲು ಆರ್.ಅಶೋಕ ಮನವಿ
R. Ashoka appeals to posthumously award 'Karnataka Ratna' to late SM Krishna
ಬೆಂಗಳೂರು 12: ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ 'ಕರ್ನಾಟಕ ರತ್ನ' ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 