ಮೊಹರಂ ಅಂಗವಾಗಿ ಆರ್‌. ಎಂ. ಗೊಗೇರಿ ಅವರಿಗೆ ಸನ್ಮಾನ

ಮೊಹರಂ ಅಂಗವಾಗಿ ಆರ್‌. ಎಂ. ಗೊಗೇರಿ ಅವರಿಗೆ ಸನ್ಮಾನ R. M. Gogeri honored on the occasion of Muharram

ಲೋಕದರ್ಶನ ವರದಿ 

 ಹುಬ್ಬಳ್ಳಿ 01 : ಮೊಹರಂ ಹಬ್ಬದ ಅಂಗವಾಗಿ ಆತ್ಮೀಯರು, ಹಿರಿಯರು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರ್‌. ಎಂ. ಗೊಗೇರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  

ಖ್ಯಾತ ಹಾಸ್ಯ ಕಲಾವಿದ ಹಾಗೂ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಸಾಹಿತಿ ಎಂ. ಡಿ. ಗೊಗೇರಿ ಅವರ ಸುಪುತ್ರರಾದ ಆರ್‌. ಎಂ. ಗೊಗೇರಿ ಅವರು ಪ್ರಸ್ತುತ ಮಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದು, ನಾದ ಲೋಕದ ಮೂಲಕ ವಿವಿಧ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಅಲ್ಲದೆ, ಹುಬ್ಬಳ್ಳಿ ನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.  

ಈ ಸಂದರ್ಭದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು ಹೊದಿಸಿ, ಮಾಲಾರೆ​‍್ಣ ಮಾಡಿ, ಗ್ರಂಥ ನೀಡಿ ಗೌರವಿಸಲಾಯಿತು. ಇದೇ ವೇಳೆ ಮೊಹರಂ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.  

ಕಾರ್ಯಕ್ರಮದಲ್ಲಿ ರುದ್ರಾಕ್ಷಿಮಠದ ಪೀಠಾಧ್ಯಕ್ಷರಾದ ಪೂಜ್ಯ ಬಸವಲಿಂಗ ಸ್ವಾಮೀಜಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಗ್ರಂಥಪಾಲಕ ಡಾ. ಸುರೇಶ್ ಡಿ. ಹೊರಕೇರಿ, ವಿರೂಪಾಕ್ಷ ಕಟ್ಟಿಮನಿ, ಮೃತ್ಯುಂಜಯ ಮಟ್ಟಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.