ಆರ್ ಬಿ ತಿಮ್ಮಾಪುರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿ: ಮದಾರ ಮುಲ್ಲಾ
RB Thimmapuri should be made Deputy Chief Minister: Madara Mulla
ಲೋಕದರ್ಶನ ವರದಿ
ಮಹಾಲಿಂಗಪುರ 30: ದಲಿತ ಸಮುದಾಯದ ಪ್ರಭಾವಿ ನಾಯಕರಾದ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರಿಗೆ ನೂತನ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡಬೇಕೆಂದು ತೇರದಾಳ್ ಮತಕ್ಷೇತ್ರದ ಅಲ್ಪಸಂಖ್ಯಾತರ ಯುವ ಮುಖಂಡ ಮದಾರ ಮುಲ್ಲಾ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆರ್ ಬಿ ತಿಮ್ಮಾಪುರ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದಾರೆ. ಶೋಷಿತರ, ದೀನ ದಲಿತರ ಹಾಗೂ ಹಿಂದುಳಿದ ವರ್ಗಗಳ ಧ್ವನಿಯಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ದಲಿತ ಸಮುದಾಯಕ್ಕೆ ಸೂಕ್ತ ಪ್ರಾತಿನಿತ್ಯ ನೀಡುವ ಅಗತ್ಯವಿದೆ. ರಾಜ್ಯದಲ್ಲಿ ದಲಿತ ಸಮುದಾಯದ ಸರ್ವೋತೋಮುಖ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಆರ್ ಬಿ ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಅತ್ಯಂತ ಸೂಕ್ತವಾಗಿದೆ ಎಂದು ಹೇಳಿದರು.
ನೂತನ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಹೈಕಮಾಂಡ್ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಅವರಿಗೆ ಡಿಸಿಎಂ ಹುದ್ದೆಯನ್ನು ಅವಕಾಶ ಮಾಡಿಕೊಡಬೇಕೆಂದು. ತೇರದಾಳ ಮತಕ್ಷೇತ್ರದ ಅಲ್ಪಸಂಖ್ಯಾತರ ಯುವ ಮುಖಂಡರಾದ ಮದಾರ ಮುಲ್ಲಾ ಆಗ್ರಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 