ಅದ್ದೂರಿ ಯಶಸ್ವಿ ಕಂಡ ಆರ್‌ಡಿಪಿಆರ್ ಕ್ರೀಡಾಕೂಟ : ಸಮಗ್ರ ವೀರಾಗ್ರಣಿ ಭಾಜನವಾದ ಹೊನ್ನಾವರ, ರನ್ನರ್ ಅಪ್ ಸಿದ್ದಾಪುರ
RDPR Games a resounding success: Honnavar, runner up Siddapur
ಕಾರವಾರ 24: ಜಿ.ಪಂ. ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಎನರ್ಜಿ ಹಾಗೂ ಉತ್ಸಾಹ ನೀರೀಕ್ಷಿತ ಮಟ್ಟಕ್ಕಿಂತ ಮೇಲಕ್ಕಿದೆ. ನಿಮ್ಮ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರದರ್ಶನ ತುಂಬಾ ಖುಷಿ ನೀಡಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ದೀಲೀಷ್ ಶಶಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಉತ್ತರ ಕನ್ನಡ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.
ಕ್ರೀಡಾಪಟುಗಳ ಆಸಕ್ತಿಯನ್ನು ವೀಕ್ಷಿಸಿದ ಅವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ವಿವಿಧ ಪಂದ್ಯಾವಳಿಗಳನ್ನು ನಡೆಸಿ ಪ್ರೋತ್ಸಾಹಿಸುವುದಾಗಿ ಹೇಳಿದರು. ಸಾಂಸ್ಕೃತಿಕ ಮತ್ತು ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಸಮಗ್ರ ವೀರಾಗ್ರಣಿ ಪ್ರಶಸ್ತಿಗೆ ಹೊನ್ನಾವರ ತಾಲೂಕು ಭಾಜನರಾದರೆ ಅಷ್ಟೇ ತೀವ್ರತರವಾದ ಪೈಪೋಟಿ ನೀಡಿ ದ್ವೀತಿಯ ಸ್ಥಾನಕ್ಕೆ ಸಿದ್ದಾಪುರ ತಾಲೂಕು ತೃಪ್ತಿಪಡಬೇಕಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಆಡಳಿತ ವಿಭಾಗದ ಉಪ ಕಾರ್ಯದರ್ಶಿಗಳಾದ ಎಮ್ ಎಸ್ ಅಲ್ಲಾಭಕ್ಷ, ಜಿ.ಪಂ ಯೋಜನಾ ನಿರ್ದೇಶಕರಾದ ಕರೀಂ ಅಸಾದಿ, ಜಿ.ಪಂ ಅಭಿವೃದ್ಧಿ ವಿಭಾಗದ ಉಪಕಾರ್ಯದರ್ಶಿಗಳಾದ ಪ್ರಕಾಶ್ ಹಾಲಮ್ಮನವರ್, ಜಿ ಪಂ ಮುಖ್ಯ ಯೋಜನಾಧಿಕಾರಿಗಳಾದ ಸೋಮಶೇಖರ್ ಮೇಸ್ತ, ಜಿ. ಪಂ ಮುಖ್ಯ ಲೆಕ್ಕಧಿಕಾರಿಗಳಾದ ಆನಂದ್ ಹಬೀಬ್, ಕಾರ್ಯ ನಿರ್ವಾಹಕ ಅಭಿಯಂತರರು ಸತೀಶ್ ಜಹಾಗೀರ್ದಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯತ್ ಎಪಿಒ ಜಿ. ಸತೀಶ್, ಸಹಾಯಕ ನಿರ್ದೇಶಕರಾದ ರವಿ ನಾಯ್ಕ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ಸಂಬಂಧಿಸಿದ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 