ಬೆಂಗಳೂರು,ಫೆ.15 : ಮೀಸಲಾತಿ ವಿರುದ್ಧವಾಗಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅಸಂವಿಧಾನಿಕ ಹಾಗೂ ಹಿಂದುಳಿದ ಜನರ ವಿರುದ್ವಾಗಿದ್ದು ಈ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರವು ಕೊಡಲೇ ಮರುಪರಿಶೀಲನಾ ಅರ್ಜಿಸಲ್ಲಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.ಸುದ್ದಿಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದ ಖಂಡನಿಯಾವಾಗಿದೆ ಎಂದು ಆರೋಪಿಸಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಮೂಲಭೂತ ಆಶಗಳನ್ನು ಒಂದೊಂದಾಗಿ ಕಸಿದುಕೊಳ್ಳುತ್ತಿದ್ದು, ತಳವರ್ಗದ ಜನರಿಗೆ ಅನ್ಯಾಯ ಮಾಡುವ ಕೆಲಸ ಮಾಡುತ್ತಿದೆ. ನಾವೇನು ಮೀಸಲಾತಿ ವಿರೋಧಿಗಳಲ್ಲ ಎಂದು ಹೇಳಿದರು.ದೇಶದಲ್ಲಿ ಎಲ್ಲಾ ಜಾತಿ ಧರ್ಮದ ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಸ್ವಾತಂತ್ರ್ಯ ಬಂದ ನಂತರ ಅಂದಿನ ಸರ್ಕಾರಗಳು ಸಾಕಷ್ಟು ಕೆಲಸ ಮಾಡಿವೆ. ಹಿಂದುಳಿದವರಿಗೆ ಪ್ರೋತ್ಸಾಹ ಹಾಗೂ ಉತ್ತೇಜನ ನೀಡಬೇಕೆಂದು ಮೀಸಲಾತಿಯನ್ನ ಜಾರಿಗೆ ತಂದರು. ಆದರೆ ಬಿಜೆಪಿ ಸರ್ಕಾರ ಸಂವಿಧಾನದ ಈ ಎಲ್ಲಾ ಆಶಯಗಳನ್ನು ಬದಿಗೆ ಸರಿಸಿ ಸಂವಿಧಾನವನ್ನೇ ಬುಡಮೇಲುಮಾಡುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ತೀರ್ಪಿನ ಬಗ್ಗೆ ಜನಾಭಿಪ್ರಾಯ ರೂಪಿಸಲು ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಮಾರ್ಚ್ ಮೊದಲನೆಯ ವಾರದಲ್ಲಿ ನಡೆಸಲಾಗುವುದಾಗಿ ಮಾಹಿತಿ ನೀಡಿದರು.