ರಾಚವಿವಿ ವಿನೂತನ ಕಾರ್ಯಕ್ರಮ: ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಕಿರುಹೊತ್ತಿಗೆ ಲೋಕಾರೆ್ಣ
Rachavvi's innovative program: Minister Satish Jarkiholi presents a booklet to the public
ಲೋಕದರ್ಶನ ವರದಿ
ಮನೆ ಮನೆಗೆ, ಮನ ಮನಕೆ ಬಾಬಾಸಾಹೇಬರು: ಅಭಿಯಾನಕ್ಕೆ ಚಾಲನೆ
ಬೆಳಗಾವಿ 11: ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಏ. 14ರಂದು ತನ್ನ ಎಲ್ಲಾ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ‘ಮನೆ ಮನೆಗೆ, ಮನ ಮನಕೆ ಬಾಬಾಸಾಹೇಬರು’ ಎಂಬ ವಿನೂತನ ಮತ್ತು ವಿಶೇಷವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿರುವುದು. ಬೇರೆ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಮಾದರಿಯಾಗುವಂತಿದೆ ಎಂದು ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಶಂಶಿಸಿದರು. ಏಪ್ರೀಲ್ 10 ರಂದು ಬೆಳಗಾವಿಯ ಜಿಲ್ಲಾ ಆಡಳಿತ ಕಚೇರಿಯಲ್ಲಿ ‘ಮನೆ ಮನೆಗೆ, ಮನ ಮನಕೆ ಬಾಬಾಸಾಹೇಬರು’ ಕಿರುಹೊತ್ತಿಗೆಯನ್ನು ಲೋಕಾರೆ್ಣ ಮಾಡಿ ಅವರು ಮಾತನಾಡಿದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಪೀಠದಿಂದ ಫೆಬ್ರುವರಿ 27 ಮತ್ತು 28 ರಂದು ‘ವಿವೇಚನೆ, ವೈಚಾರಿಕತೆ ಮತ್ತು ಗಣರಾಜ್ಯ’ ಡಾ. ಬಿ.ಆರ್. ಅಂಬೇಡ್ಕರ್’ ರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ಸಚಿವರು ನೀಡಿದ ಸಲಹೆಯನ್ನು ಸಾಕಾರಗೊಳಿಸುವತ್ತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಮತ್ತು ಕುಲಸಚಿವ ಸಂತೋಷ ಕಾಮಗೌಡ ಇವರ ಪರಿಕಲ್ಪನೆಯಡಿಯಲ್ಲಿ ಈ ಸುಂದರವಾದ ಕಿರುಹೊತ್ತಿಗೆ ಸಾಕಾರಗೊಂಡಿದೆ.
ಈ ಕಿರುಹೊತ್ತಿಗೆಯನ್ನು ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ 1,50,000 ವಿದ್ಯಾರ್ಥಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಮುಂಚಿತ ಆರಂಭವಾಗಿ ಈ ತಿಂಗಳಾದ್ಯಾಂತ ಪ್ರತಿ ವಿದ್ಯಾರ್ಥಿಗೆ ತಲುಪಿಸಲು ಕ್ರಮವಹಿಸಲಾಗಿದೆ. ಹಾಗೂ ಏಕಕಾಲಕ್ಕೆ 1,50,000 ವಿದ್ಯಾರ್ಥಿಗಳಿಗೆ ಮನೆ ಮನೆಗೆ ತಲುಪಿಸುವ ವಿಶ್ವವಿದ್ಯಾಲಯದ ಕಾರ್ಯಕ್ಕೆ ಉಸ್ತುವಾರಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಏಪ್ರೀಲ್ -14ರ ಅಭಿಯಾನದ ಮೂಲಕ ಯುವಜನರಲ್ಲಿ ಬಾಬಾಸಾಹೇಬರ ವಿಚಾರಗಳ ಅರಿವು ಹೆಚ್ಚಿಸಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ದಾರಿಯಲ್ಲಿ ಹೊಸ ಚಿಂತನೆಗೆ ಪ್ರೇರಣೆ ನೀಡಲಿದೆ ಎಂದು ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಅವರು ಅಭಿವ್ಯಕ್ತಿಸಿದರು. ಈ ಕಿರುಹೊತ್ತಿಗೆಯನ್ನು ಸಂಕಲಿಸಿದ ಡಾ. ಗಜಾನನ ನಾಯ್ಕ್ ಹಾಗೂ ಡಾ. ಶೋಭಾ ನಾಯಕ ಅವರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾಜಮುಖಿ ಚಿಂತನೆಗಳನ್ನು ಬಲಪಡಿಸುವತ್ತ ವಿಶ್ವವಿದ್ಯಾಲಯವು ದಾಪುಗಾಲು ಹಾಕುತ್ತಿದ್ದು, ಅಭಿಯಾನದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳುವಂತೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ ಅವರು ಕರೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸಂಯೋಜಿತ ಮಹಾವಿದ್ಯಾಲಯಗಳ ಪ್ರಾಂಶುಪಾಲರಿಗೆ ಆನ್ಲೈನ್ ಸಭೆಯನ್ನು ಆಯೋಜಿಸಿ ಕಾರ್ಯಗತವಾಗಲು ಹುರಿದುಂಬಿಸಿದ್ದಾರೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಪೀಠದ ಅಧ್ಯಕ್ಷ ಪ್ರೊ. ಅಶೋಕ ಡಿ’ಸೋಜಾ ಅವರು ಅಧ್ಯಾಪಕರಲ್ಲಿ, ವಿದ್ಯಾರ್ಥಿಗಳಲ್ಲಿ ಬಾಬಾಸಾಹೇಬರ ವಿಚಾರಧಾರೆಗಳು ತಲುಪಬೇಕು ಎಂಬ ನಿಟ್ಟಿನಲ್ಲಿ ಉತ್ಸಾಹದಿಂದ ಕಾರ್ಯತತ್ಪರಾಗಿರುವುದಲ್ಲದೇ, ಇನ್ನೂ ಅನೇಕ ಕಾರ್ಯಕ್ರಮಗಳನ್ನು, ಸಂವಾದಗಳನ್ನು, ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂದರು. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸಾಮಾಜಿಕ ನ್ಯಾಯದ ದಾರಿಯಲ್ಲಿ ಹೊಸ ಚಿಂತನೆಗೆ ಪ್ರೇರಣೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಶುಭ ಕೋರಿದರು. ರಾ.ಚ.ವಿ.ಯ ಕುಲಸಚಿವರು(ಮೌಲ್ಯಮಾಪನ) ಪ್ರೊ. ಡಿ. ಎನ್. ಪಾಟೀಲ್, ಡಾ. ರವಿ ದಳವಾಯಿ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಪೀಠದ ಸಂಯೋಜಕ ಡಾ. ಮಹೇಶಕುಮಾರ್ ಎನ್. ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಈ ಅಭಿಯಾನವು ಸಮಾಜದ ಎಲ್ಲಾ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದರ ಜೊತೆಗೆ ಯುವಜನತೆ ಹಾಗೂ ಸಾರ್ವಜನಿಕರಲ್ಲಿ ಸಮಾನತೆ, ಸೌಹಾರ್ದತೆಯನ್ನು ಅಳವಡಿಸಿಕೊಳ್ಳಲು ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯ ಪಡಲಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 