ರಾಧಾಕೃಷ್ಣನ್ ಸ್ಮರಣಾರ್ಥ: ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
Radhakrishnan Memorial: Best Teacher Award
ಹೂವಿನ ಹಡಗಲಿ 21: ಶಿಕ್ಷಕರು ರಾಷ್ಟ್ರ ಕಟ್ಟುವ ಶಿಲ್ಪಿಗಳು ಎಂದು ಉಪ ಪ್ರಾಂಶುಪಾಲರ ಸಂಘದ ಜಿಲ್ಲಾ ಉಪಾಧ್ಯಕ್ಷ ಕೋರಿ ಹಾಲೇಶ್ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಬೀಚಿ ಗ್ರಂಥಾಲಯ ಬೆಂಬಲಿಗರ ಬಳಗದ 27 ನೇ ವರ್ಷದ ಡಾ ರಾಧಾಕೃಷ್ಣನ್ ಸ್ಮರಣಾರ್ಥ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.ಸತತ 27 ವರ್ಷ ನಿರಂತರವಾಗಿ ಉತ್ತಮ ಶಿಕ್ಷಕರನ್ನು ಗೌರವಿಸುವ ಬಳಗದ ಕಾರ್ಯ ಶ್ಲಾಘನೀಯ ಎಂದು ಬಣ್ಣಿಸಿದರು.ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ ಕೊಟ್ರಗೌಡ ಶಿಕ್ಷಕರನ್ನು ಗೌರವಿಸಿದರೆ ಸಮಾಜವನ್ನು ಗೌರವಿಸಿದಂತೆ.ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸುತ್ತವೆ.ಬಳಗದ ಕಾರ್ಯಕ್ರಮಗಳಿಗೆ ಸಹಕಾರ ನೀಡುವುದಾಗಿ ಹೇಳಿದರು.
27 ನೇ ವರ್ಷದ ಡಾ ರಾಧಾಕೃಷ್ಣನ್ ಸ್ಮರಣಾರ್ಥ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಸರೋಜಮ್ಮ ಎಂ (ಪ್ರಾಥಮಿಕ)ಸಣ್ಣಲಕ್ಕಪ್ಪ ಎಂ (ಪ್ರೌಢ)ನಟರಾಜ್ ಪಾಟೀಲ್ (ಕಾಲೇಜು)ಕೆ ಬಿ ಬಸವರಾಜ (ಗ್ರಂಥಾಲಯ)ನೀಡಿ ಗೌರವಿಸಲಾಯಿತು.ದೈಹಿಕ ಪರೀವೀಕ್ಷಕ ರಫಿ ಅಹಮದ್ ಖವಾಸ್, ಪತ್ರಕರ್ತರ ಸಂಘಗಳ ಅಧ್ಯಕ್ಷರಾದ ಎಂ ಪಿ ಎಂ ಶಿವಪ್ರಕಾಶ್ ಬಿಚ್ಚುಗತ್ತಿ ಖಾಜಾ ಹುಸೇನ್ ವೀರೇಶ್ ಕಲ್ಮಠ ಶಾಖಾ ಗ್ರಂಥಾಲಯಾಧಿಕಾರಿ ಬಿ ನಾರಾಯಣ್ ದಾಸ್ ಬೀರಬ್ಬಿ ಬಸವರಾಜ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಕುರಿ ನಿವೃತ್ತ ಉಪ ಪ್ರಾಂಶುಪಾಲ ಪಿ ಪ್ರಕಾಶ್ ಇತರರು ಉಪಸ್ಥಿತರಿದ್ದರು.ಬಳಗದ ಅಧ್ಯಕ್ಷ ಸುರೇಶ ಅಂಗಡಿ ಅಧ್ಯಕ್ಷತೆ ವಹಿಸಿದ್ದರು.
ಚಿತ್ತಾರ ನೃತ್ಯ ಶಾಲೆಯ ಮಕ್ಕಳು ನೃತ್ಯ ಪ್ರದರ್ಶಿಸಿದರು.ಚಂದನ ಕಲಾ ಸಂಸ್ಥೆಯ ಎಂ ಪಿ ಎಂ ಪ್ರಶಾಂತ್, ನಾಗೇಶ್ ಕನ್ನಡ ಗೀತೆಗಳನ್ನು ಪ್ರಸ್ತುತ ಪಡಿಸಿದರು.ಎಂ ದಯಾನಂದ, ಶಂಕರ್ ಬೆಟಗೇರಿ, ವಿಶ್ವನಾಥ್ ಚಿಂಚಿ ಕೆ ದೊಡ್ಡಬಸಪ್ಪ, ನಾಗರಾಜ್ ಮಲ್ಕಿಒಡೆಯರ್ ನಿರ್ವಹಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 