‘ಸಮಾಜ ಸೇವಾರತ್ನ’ ಪ್ರಶಸ್ತಿಗೆ ರಾಘವೇಂದ್ರ ಶಿಲ್ಪಿ ಆಯ್ಕೆ
Raghavendra Shilpi selected for ‘Samaja Sevaratna’ award
ಪಾಲಬಾವಿ 18 : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಘಟನಾ ಸಂಚಾಲಕ ರಾಘವೇಂದ್ರ ಶಿಲ್ಪಿ ಅವರಿಗೆ ‘ಸಮಾಜ ಸೇವಾರತ್ನ’ ಪ್ರಶಸ್ತಿ ಲಭಿಸಿದೆ. ಆತ್ಮಶ್ರೀ ಕನ್ನಡ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನ, ಬೆಂಗಳೂರು ಇವರ ಆಶ್ರಯದಲ್ಲಿ ನಗರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ಆಗಸ್ಟ್ 19ರಂದು ಬೆಳಗ್ಗೆ 10 ಗಂಟೆಗೆ 80ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ರಾಯಬಾಗ ತಾಲ್ಲೂಕಿನ ಹಿಡಕಲ್ಲ ಗ್ರಾಮದಲ್ಲಿನ ಸಮಾಜ ಸೇವಕರೂ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಘಟನಾ ಸಂಚಾಲಕರೂ ಆಗಿರುವ ರಾಘವೇಂದ್ರ ಸಿಂಗ್ ಅವರಿಗೆ ‘ಸಮಾಜ ಸೇವಾರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಚಲನಚಿತ್ರ ನಿರ್ದೇಶಕ ಹಾಗೂ ಸಾಹಿತಿ ಡಾ. ಗುಣವಂತ ಮಂಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾಜ ಸೇವಾ ಕ್ಷೇತ್ರದಲ್ಲಿ ರಾಘವೇಂದ್ರ ಸಿಂಗ್ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 