‘ಸಮಾಜ ಸೇವಾರತ್ನ’ ಪ್ರಶಸ್ತಿಗೆ ರಾಘವೇಂದ್ರ ಶಿಲ್ಪಿ ಆಯ್ಕೆ

‘ಸಮಾಜ ಸೇವಾರತ್ನ’ ಪ್ರಶಸ್ತಿಗೆ ರಾಘವೇಂದ್ರ ಶಿಲ್ಪಿ ಆಯ್ಕೆ  Raghavendra Shilpi selected for ‘Samaja Sevaratna’ award


ಪಾಲಬಾವಿ 18 :  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಘಟನಾ ಸಂಚಾಲಕ ರಾಘವೇಂದ್ರ ಶಿಲ್ಪಿ ಅವರಿಗೆ ‘ಸಮಾಜ ಸೇವಾರತ್ನ’ ಪ್ರಶಸ್ತಿ ಲಭಿಸಿದೆ.  ಆತ್ಮಶ್ರೀ ಕನ್ನಡ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನ, ಬೆಂಗಳೂರು ಇವರ ಆಶ್ರಯದಲ್ಲಿ ನಗರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ಆಗಸ್ಟ್‌ 19ರಂದು ಬೆಳಗ್ಗೆ 10 ಗಂಟೆಗೆ 80ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.  

ರಾಯಬಾಗ ತಾಲ್ಲೂಕಿನ ಹಿಡಕಲ್ಲ ಗ್ರಾಮದಲ್ಲಿನ ಸಮಾಜ ಸೇವಕರೂ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಘಟನಾ ಸಂಚಾಲಕರೂ ಆಗಿರುವ ರಾಘವೇಂದ್ರ ಸಿಂಗ್ ಅವರಿಗೆ ‘ಸಮಾಜ ಸೇವಾರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಚಲನಚಿತ್ರ ನಿರ್ದೇಶಕ ಹಾಗೂ ಸಾಹಿತಿ ಡಾ. ಗುಣವಂತ ಮಂಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಸಮಾಜ ಸೇವಾ ಕ್ಷೇತ್ರದಲ್ಲಿ ರಾಘವೇಂದ್ರ ಸಿಂಗ್ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.