ರಾಹುಲ್ ಗಾಂಧಿ ಜನ್ಮದಿನ: ಮಕ್ಕಳಿಗೆ ನೋಟ್ ಬುಕ್ ವಿತರಣೆ

ರಾಹುಲ್ ಗಾಂಧಿ ಜನ್ಮದಿನ: ಮಕ್ಕಳಿಗೆ ನೋಟ್ ಬುಕ್ ವಿತರಣೆ  Rahul Gandhi's birthday: Notebooks distributed to children

ತಾಳಿಕೋಟಿ 19: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ 55ನೇ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ಸಮಿತಿ ತಾಳಿಕೋಟಿ ವತಿಯಿಂದ ಪಟ್ಟಣದ ಶ್ರೀ ಸರಸ್ವತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಾಳಿಕೋಟಿ ಬ್ಲಾಕ್ ್ಘ ಮುದ್ದೇಬಿಹಾಳ ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆಸಿಫ್ ಕೆಂಭಾವಿ ಮಾತನಾಡಿ ಇಂದು ಇಡೀ ದೇಶದಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ 55ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳಾದ ನಾವು ವಿಶಿಷ್ಟ ರೀತಿಯಲ್ಲಿ ಹಲವಾರು ಸಮಾಜ ಸೇವಾ ಕಾರ್ಯಗಳ ಮೂಲಕ ಆಚರಿಸುತ್ತಿದ್ದೇವೆ. 

 ಇಂದು ಈ ಶಾಲೆಯ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗಲು ನೋಟ್ ಬುಕ್ ಗಳನ್ನು ವಿತರಿಸಿದ್ದೇವೆ ಮಕ್ಕಳು ಆಸಕ್ತಿಯಿಂದ ವಿದ್ಯಾಭ್ಯಾಸ ಮಾಡಿ ದೇಶದ ಉತ್ತಮ ಪ್ರಜೆಗಳಾಗಿ ಬೆಳೆಯಲಿ ಎಂಬುದು ನಮ್ಮ ಕಾಳಜಿಯಾಗಿದೆ. ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರಿಗೆ ದೇವರು ಆಯುರಾರೋಗ್ಯ ಆಯುಷ್ಯ ಹಾಗೂ ಅಧಿಕಾರ ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಪಲ್ಲವಿ ಕಡಕೋಳ, ಯುವ ಕಾಂಗ್ರೆಸ್ ಅಧ್ಯಕ್ಷ ಖಾಜಾ ಪಟೇಲ ಬಿರಾದಾರ, ಅಂಬೇಡ್ಕರ್ ಸೇನೆ ಅಧ್ಯಕ್ಷ ಗೋಪಾಲ ಕಟ್ಟಿಮನಿ,ಅಯಾಜ್ ಸೋಲಾಪೂರ, ಆಬಿದ್ ಲಾಹೋರಿ, ಮಧು ಚಲವಾದಿ, ಶಾಹಿದ್ ಜಮಖಂಡಿ, ಶಾಹಿದ್ ಶಿವಣಗಿ, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.