ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ರಾಹುಲ್ ಗಾಂಧಿ ಜನ್ಮದಿನಾಚರಣೆ
Rahul Gandhi's birthday celebrated by planting and watering saplings
ಲೋಕದರ್ಶನ ವರದಿ
ಕಂಪ್ಲಿ 20: ಪಟ್ಟಣದ ಕೊಟ್ಟಾಲ್ ರಸ್ತೆಯ ಚಂದ್ರಕಲಾ ಚಿತ್ರಮಂದಿರ ಎದುರುಗಡೆಯ ಮಾರೆಣ್ಣ ಹೋಟಲ್ ಬಳಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕ ಆರ್.ಪಿ.ಶಶಿಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಶನಿವಾರ ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ಹುಟ್ಟು ಹಬ್ಬವನ್ನ ಅದ್ಧೂರಿಯಾಗಿ ಆಚರಿಸಲಾಯಿತು.
ನಂತರ ಆರ್.ಪಿ.ಶಶಿಕುಮಾರ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಡೀ ದೇಶಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡುವ ಜೊತೆಗೆ ದೇಶದ ಜನರ ಸೇವೆಗೆ ಕಂಕಣ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ನಾಯಕರ ಮಾರ್ಗದರ್ಶನದಲ್ಲಿ ಮತ್ತು ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಜನರ ಸೇವೆಗೆ ಮುಂದಾಗುತ್ತೇವೆ ಎಂದರು.
ಈ ಸಂದ್ರಭದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಕೆ.ಷಣ್ಮುಖಪ್ಪ, ಎನ್.ಹಬೀಬ್ ರೆಹಮಾನ್, ಕೆ.ಎಸ್.ಚಾಂದ್ ಬಾಷಾ, ಉಸ್ಮಾನ್, ಬಿ.ಸಿದ್ದಪ್ಪ, ಸುರೇಶ್ಗೌಡ, ವಿರುಪಾಕ್ಷಿ, ರಾಘು, ಅಕ್ಕಿ ಜಿಲಾನ್ ಸುಧಾಕರ್, ಜಾಫರ್, ಆಟೋ ರಘು, ಎಂ.ರಾಜಭಕ್ಷಿ, ಗೋಪಿ, ಉಮೇಶ್ ಗೌಡ, ಗೌಡ್ರು ಸಿದಪ್ಪ, ಶಿವಕುಮಾರ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 