ಹೈದರಾಬಾದ್, ಜುಲೈ 28 ಕೇಂದ್ರದ ಮಾಜಿ ಸಚಿವ ಎಸ್ ಜೈಪಾಲ್ ರೆಡ್ಡಿ ಅವರ ನಿಧನಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ನಿಧನದ ವಾರ್ತೆ ಕೇಳಲು ದುಃಖವಾಗುತ್ತಿದೆ ಎಂದು ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ.
ಉತ್ತಮ ಸಂಸದರಾಗಿ, ಸಚಿವರಾಗಿ ಅವರು ಜೀವನವನ್ನು ಸಾರ್ವಜನಿಕ ಸೇವೆಗಾಗಿ ಅರ್ಪಿಸಿದ್ದರು ಎಂದು ಅವರು ಗುಣಗಾನ ಮಾಡಿದ್ದಾರೆ.
ಅವರ ಕುಟುಂಬ ಮತ್ತು ಸ್ನೇಹಿತರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದೂ ಹೇಳಿದ್ದಾರೆ.