ತಿಹಾರ್ ಜೈಲಿನಲ್ಲಿ ಚಿದಂಬರಂ ಭೇಟಿಯಾದ ರಾಹುಲ್, ಪ್ರಿಯಾಂಕಾ
ನವದೆಹಲಿ, ನ ೨೭- ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂದಿಸಿ ತಿಹಾರ್ ಜೈಲಿನಲ್ಲಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಬುಧವಾರ ಭೇಟಿಯಾಗಿದ್ದಾರೆ.
ಪ್ರಿಯಾಂಕಾ ಹಾಗೂ ರಾಹುಲ್ ಗಾಂಧಿ ತಿಹಾರ್ ಜೈಲಿನಲ್ಲಿ ಚಿದಂಬರಂ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಕೂಡ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿ ಬುಧವಾರ ಮುಕ್ತಾಯಗೊಳ್ಳಲಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರ ಕೈಗೆತ್ತಿಕೊಳ್ಳುವ ಒಂದು ಗಂಟೆಗೆ ಮೊದಲು ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ.