ನವದೆಹಲಿ, ಜ 9 ಕೇರಳದಲ್ಲಿ ಸಂಭವಿಸಬಹುದಾದ ಹಂದಿ ಜ್ವರವನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಲ್ಲಿನ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಅವರಿಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಅವರ ವಯನಾಡು ಕ್ಷೇತ್ರದಲ್ಲಿ ಶಾಲೆಯೊಂದರಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಹಂದಿಜ್ವರದ ಸೋಂಕು ಕಾಣಿಸಿಕೊಂಡಿರುವುದು ವರದಿಯಾಗಿತ್ತು.
ಆದ್ದರಿಂದ ಸೋಂಕು ಹರಡದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.