ವಿವಿಧ ಕಾಮಗಾರಿಗಳಿಗೆ ಚಾಲನೆ ರಾಹುಲ ಜಾರಕಿಹೋಳಿಗೆ ಸನ್ಮಾನ
Rahula Jarkiholi felicitated for launching various projects
ಲೋಕದರ್ಶನ ವರದಿ
ಯಮಕನಮರಡಿ, 09 : ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಗುಟಗುದ್ದಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಂದಾಜು ರೂ. 42 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆಯನ್ನು ಇಂದು ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಸಾನ್ನಿಧ್ಯದಲ್ಲಿ ನೆರವೇರಿಸಿದರು.
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಬಸ್ಸಾಪೂರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಂದಾಜು ರೂ. 42 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆಯನ್ನು ಇಂದು ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಜೊತೆಗೆ ನೆರವೇರಿಸಿದರು.
ಬಸ್ಸಾಪೂರ ಗ್ರಾಮದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವ ದೃಢ ಸಂಕಲ್ಪದೊಂದಿಗೆ, ಸಚಿವರಾದ ಸತೀಶ ಜಾರಕಿಹೊಳಿಯವರ ವಿಶೇಷ ಆಸಕ್ತಿ ಹಾಗೂ ಕಾಳಜಿಯ ಫಲವಾಗಿ ಅಂದಾಜು ರೂ. 3.00 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಾದರಿ ಸರ್ಕಾರಿ ಪ್ರೌಢಶಾಲೆಯ ಕಾಮಗಾರಿಗಳ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿದರು. ಕರಗುಪ್ಪಿ (ಯಲ್ಲಾಪುರ) ಗ್ರಾಮದಲ್ಲಿ ಇಂದು ಶ್ರೀ ಲಕ್ಷ್ಮೀ ದೇವಿ ದೇವಸ್ಥಾನ ಆವರಣದಲ್ಲಿ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನಕ್ಕೆ ಹಾಗೂ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ರೂ. 14 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳ ಜೊತೆಗೆ ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಪದಾಧಿಕಾರಿಗಳು ಕಾರ್ಯಕರ್ತರು ಮುಖಂಡರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 