ರಾಯಬಾಗ ಟಿಡಿಎಸ್, ಜಿಎಸ್ಟಿ ತಕ್ಷಣ ರದ್ದುಗೊಳಿಸಬೇಕೆಂದು ಆಗ್ರಹಿಸಿ ಮನವಿ

ರಾಯಬಾಗ 13: ಕೇಂದ್ರ ಸರಕಾರ ಸಹಕಾರ ಸಂಸ್ಥೆಗಳ ಮೇಲೆ ಆದಾಯ ತೆರಿಗೆ, ಟಿಡಿಎಸ್ ಹಾಗೂ ಜಿಎಸ್ಟಿ ವಿಧಿಸಿರುವುದನ್ನು ತಕ್ಷಣ ರದ್ದುಗೊಳಿಸಬೇಕೆಂದು ಆಗ್ರಹಿಸಿ ರಾಯಬಾಗ ತಾಲೂಕು ಸಹಕಾರ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಪಟ್ಟಣದ ಝೇಂಡಾಕಟ್ಟೆ ಬಳಿ ಮಾನವ ಸರಪಳಿ ನಿಮರ್ಿಸಿ, ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರ ಚಂದ್ರಕಾಂತ ಭಜಂತ್ರಿ ಮೂಲಕ ಕೇಂದ್ರ ಹಣಕಾಸು ಸಚಿವರಿಗೆ ಶುಕ್ರವಾರ ಮನವಿ ಸಲ್ಲಿಸಿದರು. 

ತಾಲೂಕು ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ವಸಂತ ಹೊಸಮನಿ ಮಾತನಾಡಿ, ಸಹಕಾರ ಕ್ಷೇತ್ರ ದೇಶದ ಕೃಷಿಕರ, ಮಧ್ಯಮ ವರ್ಗದವರ ಹಾಗೂ ಕಡು ಬಡವರಿಗೆ ಸೇವೆ ನೀಡುವ ಕ್ಷೇತ್ರವಾಗಿದ್ದು, ದೇಶದ ಆಥರ್ಿಕ ವ್ಯವಸ್ಥೆಗೆ ಅಮೂಲ್ಯವಾದ ಕೊಡುಗೆ ನೀಡಿದೆ. ಆದರೆಕೇಂದ್ರ ಸರಕಾರ ಇತ್ತೀಚಿನ ದಿನಗಳಲ್ಲಿ ಸಹಕಾರಕ್ಷೇತ್ರದ ಮೇಲೆ ಹಲವು ರೀತಿಯ ನಿಯಂತ್ರಣ ಕ್ರಮಗಳನ್ನು ಹಾಕುವ ಮೂಲಕ ಸಹಕಾರ ಕ್ಷೇತ್ರದ ಬೆಳವಣಿಗೆಯನ್ನು ಕುಂಠಿತಗೊಳಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದೇಶದ ಸಹಕಾರ ಕ್ಷೇತ್ರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೂಡಲೇ ಸಹಕಾರ ಕ್ಷೇತ್ರದ ಮೇಲೆ ವಿಧಿಸಿರುವ ಆದಾಯ ತೆರಿಗೆ, ಟಿಡಿಎಸ್ ಮತ್ತು ಜಿಎಸ್ಟಿಗಳನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿದರು. ಪಟ್ಟಣದ ಝೇಂಡಾಕಟ್ಟೆ ವೃತ್ತದಲ್ಲಿ ಮಾನವ ಸರಪಳಿ ನಿಮರ್ಿಸಿ ಪ್ರತಿಭಟನೆ ನಡೆಸಿದ್ದ ರಿಂದ ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ಆಗಿದ್ದ ರಿಂದ ವಾಹನ ಸವಾರರು ಪರದಾಡುವಂತಾಯಿತು.

ಪ್ರತಿಭಟನೆಯಲ್ಲಿ ಎಸ್.ಎಮ್.ಮದರಖಂಡಿ, ಶಂಕರ ನಾಯಿಕ, ಆರ್.ಎಸ್.ಕುಂಬಾರ, ಸದಾಶಿವ ಗಸ್ತಿ, ಎಸ್.ಎಸ್.ಮುಲ್ಲಾ, ಅಶೋಕ ಹತ್ತಾಲಟ್ಟಿ, ಅನೀಲ ಶೆಟ್ಟಿ ಸೇರಿದಂತೆ ತಾಲೂಕಿನ ವಿವಿಧ ಸಹಕಾರಿ ಸಂಘಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.