ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಾಳಿ: 1,033 ಕೆ.ಜಿ. ಆಹಾರ ಪದಾರ್ಥ ಸೀಜ್
Raid on food processing units: 1,033 kg of food items seized
ಲೋಕದರ್ಶನ ವರದಿ
ಹಾವೇರಿ, ಆ. 28: ಜಿಲ್ಲೆಯ ಆಹಾರ ಸುರಕ್ಷತಾಧಿಕಾರಿಗಳು ಹಾಗೂ ರಾಣೇಬೆನ್ನೂರು ತಹಶೀಲ್ದಾರ್ ಅವರ ಸಹಯೋಗದೊಂದಿಗೆ ರಾಣೇಬೆನ್ನೂರು ತಾಲೂಕಿನ ಕೃಷ್ಣಾಪುರ, ತರೇದಹಳ್ಳಿ ಹಾಗೂ ಹನುಮನಹಳ್ಳಿ ಗ್ರಾಮಗಳಲ್ಲಿರುವ ಆಹಾರ ಸಂಸ್ಕರಣಾ ಘಟಕಗಳ ಮೇಲೆ ಇತ್ತೀಚೆಗೆ ಅನೀರೀಕ್ಷಿತ ದಾಳಿ ನಡೆಸಿ ಒಟ್ಟು 1,033 ಕೆ.ಜಿ. ಆಹಾರ ಪದಾರ್ಥಗಳನ್ನು ಸೀಜ್ ಮಾಡಲಾಗಿದೆ.
ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡದೆ ಹಾಗೂ ಸೂಕ್ತ ರೀತಿಯಲ್ಲಿ ಸಾಗಣೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾಧಿಕಾರಿಗಳು ಸ್ಥಳ ಮಹಜರು ನಡೆಸಿ, ನೋಟಿಸ್ ಜಾರಿ ಮಾಡಿದ್ದಾರೆ. ಕೃಷ್ಣಾಪುರ ಹಾಗೂ ತರೇದಹಳ್ಳಿ ಗ್ರಾಮದ ವೆಂಕಟೇಶ್ವರ ಹ್ಯಾಚರೀಸ್ ಪ್ರೈವೇಟ್ ಲಿಮಿಟೆಡ್ನಿಂದ 382 ಕೆ.ಜಿ. ಹಾಗೂ ಹನುಮನಹಳ್ಳಿ ಗ್ರಾಮದ ವೆಸ್ಟ್ವಿಂಡ್ ಫುಡ್ ಪ್ರೊಸೆಸಿಂಗ್ ಘಟಕದಿಂದ 651 ಕೆ.ಜಿ. ಸೇರಿದಂತೆ ಒಟ್ಟು 1,033 ಕೆ.ಜಿ. ಆಹಾರ ಪದಾರ್ಥಗಳನ್ನು ಸೀಜ್ ಮಾಡಲಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅನ್ವಯ, ಸಂಬಂಧಿಸಿದ ಆಹಾರ ಉದ್ಯಮದಾರರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಅವರಿಂದ ಬರುವ ಉತ್ತರದ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿಗಳು ಹಾಗೂ ಪ್ರಭಾರ ಆಹಾರ ಸುರಕ್ಷತೆ ಮತ್ತು ಓಷಧ ಆಡಳಿತ ಅಂಕಿತ ಅಧಿಕಾರಿ ಕುಮಾರಿ ಕಲ್ಯಾಣಿ ಕಾಂಬಳೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 