ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯ ರೂ.21 ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿ: ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ

ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯ ರೂ.21 ಸಾವಿರ ಕೋಟಿ ಮೊತ್ತದ  ಕಾಮಗಾರಿಗಳು ಪ್ರಗತಿಯಲ್ಲಿ: ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ Railway Department's works worth Rs. 21 thousand crores in progress in Uttara Kannada district: Mini

ಕಾರವಾರ 06 :-ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲ್ವೆ ಇಲಾಖೆ ವತಿಯಿಂದ  ಸುಮಾರು ರೂ. 21 ಸಾವಿರಕ್ಕೂ ಕೋಟಿ ಗೂ ಅಧಿಕ ಮೊತ್ತದ ಕಾಮಗಾರಿಗಳು ವಿವಿಧ ಹಂತದಲ್ಲಿ ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ಶನಿವಾರ ಕಾರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಮಾತನಾಡಿದರು.ಮಲೆನಾಡು ಮತ್ತು ಬಯಲುಸೀಮೆಯನ್ನು ಜೋಡಿಸುವ ಉದ್ದೇಶದಿಂದ ತಾಳಗುಪ್ಪ-ಶಿರಸಿ-ಹುಬ್ಬಳಿ 158 ಕಿ.ಮೀ ಉದ್ದದ ಹೊಸ ಮಾರ್ಗವು ರೈಲ್ವೆ ಮಂಡಳಿಯಲ್ಲಿ ಅನುಮೋದನೆಯಾಗಿದ್ದು, ಸಚಿವ ಸಂಪುಟದಲ್ಲಿ ಅನುಮೋದನೆಯಾಗಬೇಕಿದೆ. ಈ ಯೋಜನೆ ಮತ್ತು ತಾಳಗುಪ್ಪ ಹೊನ್ನಾವರ ಹೊಸ ಮಾರ್ಗಕ್ಕೆ ಒಟ್ಟು ಸುಮಾರು 21 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಮುರ್ಡೇಶ್ವರ, ಗೋಕರ್ಣ ಮತ್ತು ಹೊನ್ನಾವರ ರೈಲ್ವೆ ನಿಲ್ದಾಣಗಳ ಆಧುನೀಕರಣ ಕಾಮಗಾರಿ ಪ್ರಾರಂಭವಾಗಿದೆ ಎಂದರು.  

ಉತ್ತರ ಕನ್ನಡ ಜಿಲ್ಲೆಯಲ್ಲಿ  ಹುಬ್ಬಳ್ಳಿ- ಅಂಕೋಲಾ ನಡುವಿನ 164 ಕಿ.ಮೀ ಉದ್ದದ ನೂತನ ಯೋಜನೆಯನ್ನು  16,500 ಕೋಟಿ ವೆಚ್ಚದಲ್ಲಿ ರೈಲ್ವೆ ಇಲಾಖೆ ವತಿಯಿಂದ ಮಾಡಲಾಗುತ್ತಿದೆ. ಈಗಾಗಲೇ ಸರ್ವೇ, ಡಿಪಿಆರ್, ಫಾರೆಸಟ್ ಕ್ಲಿಯರೆನ್ಸ್‌ ಕೂಡ ಮುಕ್ತಾಯಗೊಂಡಿದ್ದು, ವನ್ಯಜೀವಿ ಕ್ಲಿಯರೆನ್ಸ್‌ ಬಾಕಿ ಇದೆ. ಇನ್ನು 5-6 ತಿಂಗಳಿನೊಳಗೆ ಇದಕ್ಕೆ ಪರಿಹಾರ ಸಿಗುವ ನೀರೀಕ್ಷೆ ಇದೆ. ಈ ಯೋಜನೆಯಿಂದ ಪಶ್ಚಿಮ ಘಟ್ಟಗಳಿಗೆ ಯಾವುದೇ ರೀತಿಯಲ್ಲಿ ಅನಾನುಕುಲವಾಗುವುದಿಲ್ಲ ಎಂದ, ಸುಮಾರು 1997-98 ರಲ್ಲಿ ಆರಂಭಿಸಿದ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಕಲ್ಲಘಟಗಿವರೆಗೆ ಮಾಡಲಾಗಿದ್ದು, ಕೆಲವು ಕಾರಣಗಳಿಂದ ನಿಂತುಹೊಗಿದ್ದು, ಈ ಯೋಜನೆಗೆ 2530 ಎಕರೆ ಜಾಗ ಬೇಕಿದೆ ಎಂದರು.ಕೊಂಕಣ ರೈಲ್ವೆಯ ವೀಲೀನ ಪ್ರಕ್ರಿಯೆ ಚರ್ಚೆಯ ಹಂತದಲ್ಲಿದ್ದು, ಅವುಗಳ ಆಗುಹೋಗಗಳ ಬಗ್ಗೆ ಚರ್ಚಿಸಲಾಗುತ್ತಿದೆ. ರೈಲ್ವೆಯ ಬಹುತೇಕ ರೈಲು ನಿಲ್ದಾಣಗಳು ಆಧುನೀಕರಣಗೊಳ್ಳುತ್ತಿದ್ದು, ಕೊಂಕಣ ರೈಲ್ವೆ ನಿಲ್ದಾಣಗಳನ್ನು ಆಧುನೀಕರಣ ಮಾಡಲು ಕ್ರಮಕೈಗೊಳ್ಳಲಾಗಿದೆ. ದಾಂಡೇಲಿಯ ಅಂಬೇವಾಡಿಗೆ ಮುಂದಿನ ತಿಂಗಳನಿಂದ ರೈಲ್ವೆ ಸಂಚಾರ ಪ್ರಾರಂಭಿಸಲಾಗುವುದು ಎಂದರು. 

ಈ ಸಂದರ್ಭದಲ್ಲಿ ಪ್ರಾದೇಶಿಕ ರೈಲ್ವೆ ಮೆನೇಜರ್ ಆಶಾ ಶೆಟ್ಟಿ, ಮುಖ್ಯ ಇಂಜಿನಿಯರ್ ಪ್ರಕಾಶ್, ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದೀಲೀಪ್ ಡಿ ಭಟ್, ಹಿರಿಯ ಇಂಜಿನಿಯರ್ ಉದಯ ಭಾಸ್ಕರ್, ,ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್, ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ, ಹಿರಿಯ ಪ್ರಾದೇಶಿಕ ಆರ್ಥಿಕ ಸಲಹೆಗಾರ ಪ್ರದೀಪ್ ಬಾಳಿಗ ಮತ್ತಿತರರು ಇದ್ದರು. 

ಚಿತ್ರ ಶಿರ್ಷಿಕೆ: ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶನಿವಾರ ಕಾರವಾರ ರೈಲ್ವೆ ನಿಲ್ದಾಣದಿಂದ ಮಡಗಾಂವ್ ವರೆಗೆ ರೈಲ್ವೆ ಕಾಮಗಾರಿಗಳ ಪರೀಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಹಾಗೂ ಕೊಂಕಣ ರೈಲ್ವೆಯ ಹಿರಿಯ ಅಧಿಕಾರಿಗಳು ಇದ್ದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಉದ್ಘಾಟನೆಕಾರವಾರ 06 :- ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಜಿಲ್ಲಾ ವಕೀಲರ ಸಂಘ ಕಾರವಾರ ಇವರ ಸಹಯೋಗದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ ಕಚೇರಿಯ ಎ.ಡಿ.ಆರ್ ಕಟ್ಟಡದ ಉದ್ಘಾಟನೆಯು ಡಿ.7 ರಂದು ಬೆಳಗ್ಗೆ 11.30 ಗಂಟೆಗೆ ಕಾರವಾರ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ 2 ನೇ ಮಹಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. 

ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಾಧೀಶ ವಿಭು ಬಖ್ರು ಎ.ಡಿ.ಆರ್ ಕಟ್ಟಡವನ್ನು ಉದ್ಘಾಟಿಸಲಿದ್ದು, ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಪ್ರದೀಪ ಸಿಂಗ್ ಯರೂರ್ ಅಧ್ಯಕ್ಷತೆ ವಹಿಸಲಿದ್ದಾರೆ.  

ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷೆ ಅನು ಶಿವರಾಮನ್, ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಮತ್ತು ಹೈಕೊರ್ಟ್‌ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಎಸ್‌.ಜಿ ಪಂಡಿತ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಅಧ್ಯಕ್ಷ ಪರಮೇಶ್ವರ ಪ್ರಸನ್ನ ಬಿ, ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್‌ರ್ ಜನರಲ್ ಕೆ.ಎಸ್ ಭರತ್ ಕುಮಾರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಂತೋಷ್ ವಿ ಭಾಗ್ವತ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್‌. ಶಶಿಧರ ಶೆಟ್ಟಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ ಹೆಚ್, ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

  ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಕಾರವಾರ 06 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ (ಎನ್‌.ಸಿ.ಟಿ.ಇ ಯಿಂದ ಮಾನ್ಯತೆ ಪಡೆದಿರುವ) ಕೋರ್ಸಿನಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧಕ್ಕಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ.  

ಆರ್ಥಿಕ ವರ್ಷದ ಅನುದಾನಕ್ಕೆ ಅನುಗುಣವಾಗಿ, ಕೋರ್ಸುಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ. 25000 ಗಳ ವಿಶೇಷ ಪ್ರೋತ್ಸಾಹಧನ ಗರಿಷ್ಟ 2 ವರ್ಷ ನೀಡಲಾಗುವುದು. ಅರ್ಜಿಯನ್ನು ಸಲ್ಲಿಸಬಯಸುವ ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ಆದಾಯ 6ಲಕ್ಷ ಮೀರಿರಬಾರದು. ಮತ್ತು ವಿದ್ಯಾರ್ಥಿಗಳು ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ 50ಅ ರಷ್ಟು ಅಂಕ ಗಳಿಸಿರಬೇಕು. ಕಡ್ಡಾಯವಾಗಿ ಸೇವಾಸಿಂಧು ವೆಬ್‌ಸೈಟ್ ನಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ವೆಬ್‌ಸೈಟ್ ಣಣಠಿ:/ಜತಛಿಟಿಜಣ.ಞಚಿಡಿಟಿಚಿಣಚಿಞಚಿ.ರಠ.ಟಿ ಅಥವಾ ನಿಮ್ಮ ತಾಲೂಕಿನ ಅಲ್ಪಸಂಖ್ಯಾತರ  ತಾಲೂಕು ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಉತ್ತರ ಕನ್ನಡ, ಕಾರವಾರ ದೂರವಾಣಿ ಸಂಖ್ಯೆ 08382-220336/225020 ಅಥವಾ ಇಲಾಖಾ ಸಹಾಯವಾಣಿ 8277799990 ನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾರವಾರ: ವಿದ್ಯುತ್ ವ್ಯತ್ಯಯಕಾರವಾರ 06 : ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಕದ್ರಾ ಫೀಡರಿನ ಬಾರಗದ್ದೆ ಪ್ರದೇಶಗಳಲ್ಲಿ ಡಿ.7 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜೀನೀಯರ್(ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಕಾರವಾರ: ವಿದ್ಯುತ್ ವ್ಯತ್ಯಯಕಾರವಾರ, 06 : ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಬೈತಕೋಲ್ ಫೀಡರಿನ ವಿವಿಧ ಪ್ರದೇಶಗಳಲ್ಲಿ ಡಿ.8 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜೀನೀಯರ್(ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಕಾರವಾರ: ವಿದ್ಯುತ್ ವ್ಯತ್ಯಯಕಾರವಾರ, 06 : ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಕೋಡಿಭಾಗ ಫೀಡರಿನ ಎಲ್ಲಾ ಪ್ರದೇಶಗಳಲ್ಲಿ ಡಿ.9 ಮತ್ತು 10 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜೀನೀಯರ್(ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.