ಇಂದಿನಿಂದ ರೈಲ್ವೆ ಟಿಕೆಟ್ ಇ-ಬುಕಿಂಗ್ ಆರಂಭ: ನೈಋತ್ಯ ರೈಲ್ವೆ

ಬೆಂಗಳೂರು, ಮೇ 21,ಕೇಂದ್ರ ಸರ್ಕಾರ ಜೂನ್ 1ರಿಂದ ನಿಬಂಧನೆಗಳನುಸಾರ ರೈಲು ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ರೈಲುಗಳಿಗೆ ರೈಲುಗಳಿಗೆ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಇ ಬುಕ್ಕಿಂಗ್ ಆರಂಭವಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಮಾಹಿತಿ ನೀಡಿದ್ದು,  ಮುಂಬೈ-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸಪ್ರೆಸ್‌, ಮುಂಬೈ-ಗದಗ ಎಕ್ಸ್‌ಪ್ರೆಸ್‌, ದಾನಪುರ-ಕೆಎಸ್ಆರ್ ಬೆಂಗಳೂರು ಸಂಘಮಿತ್ರ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಾರಕ್ಕೆ ಎರಡು ಬಾರಿ ಸಂಚರಿಸುವ ನವದೆಹಲಿ-ಯಶವಂತಪುರ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಹುಬ್ಬಳ್ಳಿ-ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್, ಯಶವಂತಪುರ-ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್‌, ವಾಸ್ಕೋಡಗಾಮ-ಹಜರತ್ ನಿಜಾಮುದ್ದೀನ್ ಗೋವಾ ಎಕ್ಸ್‌ಪ್ರೆಸ್‌ ಮತ್ತು ಹೌರಾ- ಯಶವಂತಪುರ ಹೌರಾ ದುರಂತೊ ಎಕ್ಸ್‌ಪ್ರೆಸ್‌ ರೈಲುಗಳು ಕೂಡ ಜೂನ್ 1ರಿಂದ ಸಂಚರಿಸಲಿವೆ ಎಂದು ಇಲಾಖೆ ಮಾಹಿತಿ ನೀಡಿದೆ.