ಮಳೆ ಹಾನಿ: ವಿವಿಧ ಗ್ರಾಮಗಳಿಗೆ ಭೀಮಾಶಂಕರ ಕನ್ನೂರ ಭೇಟಿ
Rain damage: Bhimashankar Kannur visits various villages
ಇಂಡಿ 19: ತಾಲೂಕಿನಾದ್ಯಂತ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಮಳೆಯಿಂದ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ಇದ್ದಾರೆ ರೈತರು. ಜಿಟಿ ಜಿಟಿ ಮಳೆಯಿಂದಾಗಿ ಕೆಲವು ಗ್ರಾಮಗಳಲ್ಲಿ ಮನೆಗಳು ಬಿದ್ದು ಹಾನಿಯಾಗಿವೆ. ಈ ಸುದ್ದಿ ತಿಳಿದ ಸುರಿಯುತ್ತಿರುವ ಮಳೆಯಿಂದ ಶಿಥಿಲಗೊಂಡ ಮನೆಗಳ ವೀಕ್ಷಣೆ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ಅವರು ತಾಲೂಕಿನ ಹಡಲಸಂಗ ಗ್ರಾಮ ಪಂಚಾಯಿತಿಗೆ ಭೇಟಿ ಹಾನಿಗೊಂಡ ಮನೆಗಳಿಗೆ ಬೇಟಿ ನೀಡಿದರು.
ನರೇಗಾ ಯೋಜನೆ ಹಾಗೂ ಕರ ವಸೂಲಾತಿ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆ ಚರ್ಚಿಸಿ ನಿಗದಿ ಪಡಿಸಿದ ಗುರಿಯನ್ನು ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು. ಬಳ್ಳೊಳ್ಳಿ ಉಪ ತಹಶೀಲ್ದಾರ ಎ ಎಸ್ ಗೋಟ್ಯಾಲ, ಹಡಲಸಂಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದು ಲೋಣಿ, ಗ್ರಾಮ ಲೆಕ್ಕಾಧಿಕಾರಿಗಳು ಪ್ರವೀಣ ಲಮಾಣಿ, ಬಳ್ಳೊಳ್ಳಿ ಕಂದಾಯ ನೀರೀಕ್ಷಕ ಬಿ ಜಿ ಕೊಡವನ್ನ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 