ಮಳೆಗೆ ಕೆಸರುಗದ್ದೆಯಾದ ರಸ್ತೆಗಳು; ಪುರಸಭೆ ವಿರುದ್ಧ ನಿವಾಸಿಗಳ ಆಕ್ರೋಶ
Rain turns roads into muddy quagmires; residents vent anger against the municipality
ಲಕ್ಷ್ಮೇಶ್ವರ 06: ಪಟ್ಟಣದ ಹಲವು ವಾರ್ಡ್ಗಳಲ್ಲಿ ಸಮರ್ಕ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ಬಂದಾಗ ರಸ್ತೆಗಳು ಕೆಸರುಗದ್ದೆಗಳಾಗಿ ಮಾರು್ಡತ್ತಿವೆ. ಇದರಿಂದ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದು, ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷವಾಗಿ ಹೊಸ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಕಲಾಂ ನಗರ ಹಾಗೂ ಕೌಡೇಶ್ವರ ನಗರದ ರಸ್ತೆಗಳಲ್ಲಿ ಮಳೆಯಾದರೆ ಸಂಚಾರ ದುಸ್ತರವಾಗುತ್ತದೆ. ರಸ್ತೆಗಳು ಸಂಪೂರ್ಣ ಕೆಸರಿನಿಂದ ಆವೃತವಾಗುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.
ಕಲಾಂ ನಗರದ 22ನೇ ವಾರ್ಡ್ನ ನಿವಾಸಿಗಳು, ಮೂಲಸೌಕರ್ಯಗಳ ಕೊರತೆಯಿಂದ ಹಲವು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದರೂ ಪುರಸಭೆ ಅಧಿಕಾರಿಗಳು ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ತಕ್ಷಣ ಎಚ್ಚೆತ್ತುಕೊಂಡು ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಆರಂಭಿಸಬೇಕು. ಕನಿಷ್ಠ ತಾತ್ಕಾಲಿಕವಾಗಿ ಮೆಟಲಿಂಗ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ನಿವಾಸಿಗಳು ಪುರಸಭೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 