ಮತ್ತೆ ಮಳೆ ಆರ್ಭಟ: ಸಮರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಲು ಸೂಚನೆ: ಸಚಿವ ಆರ್.ಅಶೋಕ್
ಬೆಂಗಳೂರು,ಅ 21: ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬೆಳಗಾವಿ, ಕೊಪ್ಪಳ, ರಾಯಚೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಧಾರವಾಡ, ಹಾವೇರಿ, ಉಡುಪಿ, ಉ.ಕನ್ನಡ, ಶಿವಮೊಗ್ಗ, ದ.ಕನ್ನಡ, ಮಂಡ್ಯ ದಲ್ಲಿ ಭಾರಿ ಮಳೆಯಿಂದ ಸುಮಾರು 5444 ಮನೆಗಳು ಹಾನಿಗೀಡಾಗಿವೆ ಎಂದು ವಿವರ ನೀಡಿದರು.
ಬೆಳಗಾವಿಯಲ್ಲಿ ಮಳೆಗೆ ಒಟ್ಟು ಸಾವಿರ ಮನೆ, ದಾವಣಗೆರೆ 210, ಬಾಗಲಕೋಟೆ 600, ಚಿತ್ರದುರ್ಗ 180, ಧಾರವಾಡ 1814, ಹಾವೇರಿ 1513, ಉಡುಪಿ 2, ಶಿವಮೊಗ್ಗ 92, ಉತ್ತರ ಕನ್ನಡ 10, ದ.ಕನ್ನಡ 23 ಮನೆಗಳು ಹಾನಿಗೀಡಾಗಿವೆ ಎಂದು ತಿಳಿಸಿದರು.
ಮಳೆಯ ಆರ್ಭಟಕ್ಕೆ ಸುಮಾರು 12 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಬೆಳಗಾವಿಯಲ್ಲಿ 2, ಕೊಪ್ಪಳ 4, ರಾಯಚೂರು 1, ಬಾಗಲಕೋಟೆ 1, ಧಾರವಾಡ 1, ಮಂಡ್ಯ 1, ಹಾವೇರಿ 2 ಮಂದಿ ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಜಲಪ್ರಳಯಕ್ಕೆ ಸಮಾರು 45 ಜಾನುವರುಗಳು ಸತ್ತಿದ್ದು, ಒಟ್ಟು 12 ಕಾಳಜಿ ಕೇಂದ್ರ ಸ್ಥಾಪಿಸಲಾಗಿದೆ. 2176 ಸಂತ್ರಸ್ತರು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿಸಿದರು.
ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ನೆರೆ ಪೀಡಿತ ಸ್ಥಳಗಳಿಗೆ ತೆರಳಿ ಅಲ್ಲಿನ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡುವಂತೆ ನಿರ್ದೇಶನ ನೀಡಲಾಗಿದೆ. ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡಲಾಗಿದ್ದು, ಸಮರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ನಾನು ಬೆಳಗಾವಿ ಮತ್ತು ಯಾದಗಿರಿಗೆ ಭೇಟಿ ನೀಡಲಿದ್ದೇನೆ ಎಂದು ತಿಳಿಸಿದರು.
ನೆರೆ ಪರಿಹಾರಕ್ಕೆ ಯಾವುದೇ ರೀತಿಯ ಹಣದ ಕೊರತೆ ಇಲ್ಲ. ತುಮಕೂರು ಹಾಗೂ ವಿಜಯಪುರ ಜಿಲ್ಲಾಧಿಕಾರಿ ಖಾತೆಯಲ್ಲಿ ಹಣ ಕಡಿಮೆ ಇತ್ತು. ಕೂಡಲೇ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸಕರ್ಾರಕ್ಕೆ ಎರಡನೇ ಬಾರಿ ಸಂಭವಿಸಿರುವ ನೆರೆ ಹಾನಿ ಸಂಬಂಧ ವರದಿ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 