ಮಳೆ ಕೊರತೆ: ಹಸಿ ಬರ ಘೋಷಣೆಗೆ ರೈತರ ಮನವಿ
Rainfall deficit: Farmers urge declaration of 'green drought'
ಲೋಕದರ್ಶನ ವರದಿ
ಹಾವೇರಿ 07: ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಮಾನಪ್ಪ ಲಮಾಣಿ ಅವರು ಬ್ಯಾಡಗಿ ತಾಲೂಕಿನ ಆಳಲಗೆರಿ ಹಾಗೂ ಕಲ್ಲೆದೇವರ ಗ್ರಾಮಕ್ಕೆ ಭೇಟಿ ನೀಡಿ ರೈತರ ಗೋವಿನಜೋಳ ಬೆಳೆಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ರೈತರು ತಮ್ಮ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು ತಾಲೂಕಿನಲ್ಲಿ ಸಮರ್ಕವಾಗಿ ಮಳೆಯಾಗದೆ ಬೆಳೆಗಳು ನೀರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಕಾಣುತ್ತಿಲ್ಲ. ಜಿಟಿಜಿಟಿ ಮಳೆಯಾಗುತ್ತಿರುವುದರಿಂದ ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಅಗತ್ಯ ಪ್ರಮಾಣದ ತೇವಾಂಶ ದೊರೆಯುತ್ತಿಲ್ಲ. ಹೀಗಾಗಿ ಬೆಳೆಗಳಿಗೆ ಹಾನಿಯಾಗುವ ಆತಂಕ ಎದುರಾಗಿದ್ದು, ಸರ್ಕಾರ ಹಸಿ ಬರ ಘೋಷಣೆ ಮಾಡಬೇಕು ಎಂದು ರೈತರು ಮನವಿ ಮಾಡಿದರು.
ತಾಲೂಕಿನಲ್ಲಿ ಪ್ರಸಕ್ತ ವರ್ಷ ನೀರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಆಗಾಗ್ಗೆ ಜಿಟಿಜಿಟಿ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಈಗಾಗಲೇ ಬಿತ್ತನೆ ಮಾಡಿರುವ ಗೋವಿನಜೋಳ ಬೆಳೆ ಸಮರ್ಕವಾಗಿ ಬೆಳೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದರೆ ಬೆಳೆ ಇಳುವರಿ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ ಎಂದು ರೈತರು ಸಚಿವರಿಗೆ ತಿಳಿಸಿದರು. ಮಳೆ ಕೊರತೆಯಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಳೆಗಳ ವಾಸ್ತವಿಕ ಸ್ಥಿತಿಯನ್ನು ಪರೀಶೀಲಿಸಿ ಹಸಿ ಬರ ಘೋಷಣೆ ಮಾಡುವಂತೆ ರೈತರು ಒತ್ತಾಯಿಸಿದರು. ರೈತರ ಮನವಿಯನ್ನು ಆಲಿಸಿದ ಸಚಿವರು, ಬೆಳೆ ಪರಿಸ್ಥಿತಿ ಹಾಗೂ ಮಳೆಯ ಪ್ರಮಾಣದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದೇ ವೇಳೆ ಯೂರಿಯಾ ಗೊಬ್ಬರದ ಕೊರತೆ ಬಗ್ಗೆಯೂ ರೈತರು ಸಚಿವರ ಗಮನ ಸೆಳೆದರು. ಬೆಳೆಗಳಿಗೆ ಅಗತ್ಯವಿರುವ ಸಂದರ್ಭದಲ್ಲಿ ಯೂರಿಯಾ ಗೊಬ್ಬರ ಸಮರ್ಕವಾಗಿ ದೊರೆಯುತ್ತಿಲ್ಲ. ಸಮಯಕ್ಕೆ ಸರಿಯಾಗಿ ಗೊಬ್ಬರ ಲಭ್ಯವಾಗದಿದ್ದರೆ ಬೆಳೆಗಳ ಬೆಳವಣಿಗೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಯೂರಿಯಾ ಗೊಬ್ಬರ ಪೂರೈಕೆ ಮಾಡುವಂತೆ ಮನವಿ ಮಾಡಿದರು.
ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಅಗತ್ಯವಿರುವ ಗೊಬ್ಬರವನ್ನು ಸಮರ್ಕವಾಗಿ ಪೂರೈಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ರೈತರು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಹಿರೇಕೆರೂರು ತಾಲೂಕು ವಿವಿಧ ಗ್ರಾಮಗಳ ಕೆರೆ ವೀಕ್ಷಣೆ ಮಾಡಿದರು. ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಲ್ಜಿತ್ಕುಮಾರ, ಕೃಷಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ 