ಗದಗ ಜಿಲ್ಲೆಯಲ್ಲಿ ಮಳೆ ಕೊರತೆ: ರೈತರಿಗೆ ಪರ್ಯಾಯ ಬೆಳೆ ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಯ ಸಲಹೆ
Rainfall deficit in Gadag district: Advice to farmers on alternative crops and scientific farming me
ಲೋಕದರ್ಶನ ವರದಿ
ಗದಗ 1: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಗದಗ ಜಿಲ್ಲೆಯಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೈತರು ಪರ್ಯಾಯ ಬೆಳೆಗಳನ್ನು ಆಯ್ಕೆ ಮಾಡಿಕೊಂಡು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅನುಸರಿಸಬೇಕು ಎಂದು ಜಿಲ್ಲಾ ಕೃಷಿ ಇಲಾಖೆ ಸಲಹೆ ನೀಡಿದೆ. ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ಜಿಲ್ಲೆಯಲ್ಲಿ ಸರಾಸರಿ 550ರಿಂದ 635 ಮಿ.ಮೀ. ಮಳೆಯಾಗಬೇಕಿದ್ದರೂ, ಹೆಚ್ಚಿನ ತಾಲೂಕುಗಳಲ್ಲಿ ಜೂನ್ ತಿಂಗಳಲ್ಲಿ ಮಳೆ ಕೊರತೆ ದಾಖಲಾಗಿದೆ. ನರಗುಂದ ತಾಲೂಕಿನಲ್ಲಿ ಮಾತ್ರ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿದೆ.
ಹಲವು ತಾಲೂಕುಗಳಲ್ಲಿ ಮಳೆ ಕೊರತೆ
ಜೂನ್ ತಿಂಗಳಲ್ಲಿ ಗದಗ (-38ಅ), ಗಜೇಂದ್ರಗಡ (-44ಅ), ಮುಂಡರಗಿ (-33.90ಅ), ರೋಣ (-59ಅ) ತಾಲೂಕುಗಳಲ್ಲಿ ಗಣನೀಯ ಪ್ರಮಾಣದ ಮಳೆ ಕೊರತೆ ಕಂಡುಬಂದಿದೆ. ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ ಶೇ.17ರಷ್ಟು ಕೊರತೆ ದಾಖಲಾಗಿದ್ದು, ನರಗುಂದದಲ್ಲಿ ಶೇ.62ರಷ್ಟು ಅಧಿಕ ಮಳೆಯಾಗಿದೆ.
ಬಿತ್ತನೆ ಪ್ರಗತಿ
ಜಿಲ್ಲೆಯಲ್ಲಿ 3,13,719 ಹೆಕ್ಟೇರ್ ಬಿತ್ತನೆ ಗುರಿಯಲ್ಲಿ ಇದುವರೆಗೆ 2,34,277 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದೆ. ಮಳೆ ಕೊರತೆಯಿಂದ ಕೆಲವು ಪ್ರದೇಶಗಳಲ್ಲಿ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದ್ದು, ತೇವಾಂಶದ ಅಭಾವದಿಂದ ಬೆಳೆ ಒಣಗುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಇಲಾಖೆ ತಿಳಿಸಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 