ಮಲೆನಾಡು, ಕರಾವಳಿ-ಒಳನಾಡಿನಲ್ಲಿ ಮುಂದುವರೆದ ಅಬ್ಬರದ ಮಳೆ


ಮಡಿಕೇರಿ, ಆ.08 ಒದೊಂದು ವಾರದಿಂದ ಜಿಲ್ಲೆಯಲ್ಲಿ ಶಾಂತನಾಗಿದ್ದ ವರುಣ ನಿನ್ನೆಯಿಂದ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು ಮೂನರ್ಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಲಕ್ಷಣಗಳಿವೆ. ಕೊಡಗು, ಮಲೆನಾಡು, ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆ ಮುಂದುವರಿಯಲಿದೆ.

ಬ್ರಹ್ಮಗಿರಿ ತಪ್ಪಲಿನಲ್ಲಿ ರಾತ್ರಿಯಿಡೀ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಕಾವೇರಿ, ಕನ್ನಿಕೆ ಹಾಗೂ ಸುಜೋತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 

ನದಿ ನೀರಿನ ಪ್ರಮಾಣ ಹೆಚ್ಚಾದ್ದರಿಂದ ಭಾಗಮಂಡಲ ತ್ರಿವೇಣಿ ಸಂಗಮ ಮತ್ತೊಮ್ಮೆ ಜಲಾವೃತವಾಗಿದ್ದು, ಭಾಗಮಂಡಲ- ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯಾದ್ಯಂತ ನಿನ್ನೆ ಬೆಳಗ್ಗಿನಿಂದಲೇ ಸಾಧಾರಣವಾಗಿಯೇ ಸುರಿಯುತ್ತಿದ್ದ ಮಳೆ ಸಂಜೆಯಾಗುತ್ತಲೇ ಭಾರೀ ಗಾಳಿಯೊಂದಿಗೆ ಬಿರುಸು ಪಡೆದುಕೊಂಡಿತ್ತು.ಮಡಿಕೇರಿಯಲ್ಲಿ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆ ಈಗಲೂ ತನ್ನ ಅಬ್ಬರ ಮುಂದುವರಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇದೇ ರೀತಿ ಮಳೆ ಮುಂದುವರಿದರೆ ಮಡಿಕೇರಿ ತಲಕಾವೇರಿ ರಸ್ತೆ ಸಂಪರ್ಕ ಕಡಿತ ಸಾಧ್ಯತೆ ಇದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.