ನಾಳೆಯಿಂದ ಮಳೆ ನೀರು ಕೊಯ್ಲು ಜಾಗೃತಿ ಕಾರ್ಯಕ್ರಮ
Rainwater harvesting awareness program from tomorrow
ಬೆಳಗಾವಿ 07: ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಸಂಸ್ಥೆ, ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಹಾಗೂ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಇವರುಗಳ ಸಯುಕ್ತ ಆಶ್ರಯದಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರುಗಳಿಗೆ ಒಂದು ದಿನದ ನವೀಕರಿಸಬಹುದಾದ ಇಂಧನಗಳ ಕುರಿತು ತರಬೇತಿ ಕಾರ್ಯಕ್ರಮ ಸೋಮವಾರ ದಿಂದ 3 ದಿನಗಳ ಕಾಲ ಜರುಗಲಿದೆ. ದಿ 9 ರಂದು ಉಚಗಂವ ಭಾಗದ ಬಸೂರ್ತಿಯಲ್ಲಿ ದಿ 10 ಬೆಳಗುಂದಿ ಗ್ರಾಮದಲ್ಲಿ ಹಾಗೂ ದಿ 11 ರಂದು ಜುಮ್ಮನಾಳದಲ್ಲಿ ಆಯೋಜಿಸಲಾಗಿದೆ. ತರಬೇತಿ ಅವಧಿಯಲ್ಲಿ ಘಟ್ಟಿ ಕಸ ನಿರ್ವಹಣೆ , ಮಳೆ ನೀರು ಕೊಯ್ಲು, ಪರಿಸರ ಸಂರಕ್ಷಣೆ ನವೀಕರಿಸಬಹುದಾದ ಇಂಧನಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ ಎಂದು ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 