ಅಧಿವೇಶನದಲ್ಲಿ ಧ್ವನಿ ಎತ್ತಿ 371 ಜೆ ಕಲ್ಪಿಸಿ, ಇಲ್ಲವಾದಲ್ಲಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ :ಮಲ್ಲಿಕಾರ್ಜುನ ಕೆಂಗನಾಳ
Raise your voice in the session and introduce 371J
ಇಂಡಿ 14: ಕಲ್ಯಾಣ ಕರ್ನಾಟಕ 371 ಜೆ ಅಡಿ ಬಿಟ್ಟು ಹೋದ ಹೈದ್ರಾಬಾದ್ ವಿಮೋಚನಾ ಚಳುವಳಿಯ ಪಿತಾಮಹ ಶ್ರೀ ಸ್ವಾಮಿ ರಮಾನಂದ ತೀರ್ಥರ ತವರು ವಿಜಯಪುರ ಜಿಲ್ಲೆಯನ್ನು 371 ಜೆ ಮೀಸಲಾತಿಗೆ ಸೇರೆ್ಡ ಮಾಡುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಇಂಡಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ, ಕೇಂದ್ರ ಗೃಹಮಂತ್ರಿ, ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಸ್ವಾತಂತ್ರ್ಯ ಯೋಧ
ಅಖಂಡ ಹೈದ್ರಾಬಾದ್ ಪ್ರಾಂತಕ್ಕೆ ಅಂದಿನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವಿಜಯಪುರ ಜಿಲ್ಲೆಯ ಸಿಂದಗಿಯ ಸ್ವಾತಂತ್ರ್ಯಯೋಧ ಶ್ರೀ ಸ್ವಾಮಿ ರಮಾನಂದ ತೀರ್ಥರು ಹೈದ್ರಾಬಾದ್ ಪ್ರಾಂತವನ್ನು ಭಾರತದ ಒಕ್ಕೂಟದಲ್ಲಿ ಸೇರಿಸಲು ನೇತೃತ್ವ ವಹಿಸಿದ್ದರು. ಇಂತಹ ರಮಾನಂದ ತೀರ್ಥರ ತವರು ಜಿಲ್ಲೆ ವಿಜಯಪುರವನ್ನು 371 ಜೆ ಮೀಸಲಾತಿಯಿಂದ ಕೈ ಬಿಟ್ಟು ಜಿಲ್ಲೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದೊಡ್ಡ ಅನ್ಯಾಯ ಎಸಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು ಜಿಲ್ಲೆಗೆ 371 ಜೆ ಮೀಸಲಾತಿ ಒದಗಿಸುವುದಾಗಿ ಭರವಸೆ ನೀಡಿ ಜನರ ಮತ ಭಿಕ್ಷೆ ಪಡೆದು ಅಧಿಕಾರ ಹಿಡಿದ ಮೇಲೆ ಕೊಟ್ಟ ಭರವಸೆ ಈಡೇರಿಸಲು ವಿಫಲರಾಗಿದ್ದಾರೆ. ಜೊತೆಗೆ ಲೋಕ ಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪ್ರಣಾಳಿಕೆಯಲ್ಲಿ ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ಒದಗಿಸುವುದಾಗಿ ಭರವಸೆ ನೀಡಿದ್ದರು. ಅವರ ಪ್ರಣಾಳಿಕೆ ಕೇವಲ ಪ್ರಣಾಳ ಶಿಶು ಆಗಿದೆ ಎಂದು ಆರೋಪಿಸಿದ ಅವರು, ಕೂಡಲೇ ಈಗ ನಡೆಯುತ್ತಿರುವ ಅಧಿವೇಶನದಲ್ಲಿ ವಿಜಯಪುರ ಜಿಲ್ಲೆಗೆ 371 ಜೆ ಕುರಿತು ಧ್ವನಿ ಎತ್ತಿ ಮೀಸಲಾತಿ ಒದಗಿಸಿ ಜಿಲ್ಲೆಯ ಜನರ ಋಣ ತೀರಿಸಬೇಕು ಇಲ್ಲವಾದಲ್ಲಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ ಎಂದು ಸವಾಲು ಹಾಕಿದರು.
ವಿಜಯಪುರ ಜಿಲ್ಲೆಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ತಿಳಿದು ಬಂದಿದೆ. 371 ಜೆ ಮೀಸಲಾತಿ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಹಾಗಿದ್ದರೆ ಮಾತ್ರ ವಿಜಯಪುರ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು. ಇಲ್ಲವಾದಲ್ಲಿ ಜಿಲ್ಲೆಯಲ್ಲಿ ಸಚಿವ ಸಂಪುಟದ ಸಭೆಯ ಅವಶ್ಯಕತೆ ಇರುವುದಿಲ್ಲ ಎಂದು ಹೇಳಿದರು.
ಇನ್ನೋರ್ವ ಮುಖಂಡರ ಅಂಬಾಜಿ ನಾರಾಯಣಕರ ಮಾತನಾಡಿ, ನಂಜುಂಡಪ್ಪ ವರದಿಯ ಪ್ರಕಾರ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳ ಅತ್ಯಂತ ಹಿಂದುಳಿದ ತಾಲೂಕುಗಳಾಗಿವೆ. ಜೊತೆಗೆ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದರೂ ಕೂಡಾ 371ಜೆ ಮೀಸಲಾತಿ ಜಾರಿ ಮಾಡುವಾಗ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿದ್ದರಿಂದ ಕಳೆದ 11 ವರ್ಷಗಳಿಂದ ಜಿಲ್ಲೆಗೆ ಶೈಕ್ಷಣಿಕ, ಆರ್ಥಿಕವಾಗಿ ಸಾಕಷ್ಟು ಅನ್ಯಾಯವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಕೂಡಲೇ ಈ ಭಾಗದ ಜನರಿಗೆ ಮೀಸಲಾತಿ ಕಲ್ಪಿಸಿ ನ್ಯಾಯ ಒದಗಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ 371 ಜೆ ಮೀಸಲಾತಿ ಹೋರಾಟಗಾರರು, ರೈತ ಭಾರತ ಪಕ್ಷದ ಇಂಡಿ ಉಪ ವಿಭಾಗಾದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. 99453
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 