ರೈತ ಭಾರತ ಪಕ್ಷದಿಂಧ ಜಿಪಂ, ತಾಪಂ ಶೀಘ್ರ ಚುನಾವಣೆ ನಡೆಸಲು ಆಗ್ರಹ
Raitha Bharat Party demands early elections for Zilla Parishad and TMC
ವಿಜಯಪುರ 23: ಜಿಲ್ಲಾ ಪಂಚಾಯತಿ ಮತ್ತು ಹಾಗೂ ತಾಲೂಕಾ ಪಂಚಾಯತಿಗಳಿಗೆ ಚುನಾವಣೆ ನಡೆಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ರೈತ ಭಾರತ ಪಕ್ಷದ ವತಿಯಿಂದ ರಾಷ್ಟ್ರಪತಿಗಳು, ರಾಜ್ಯಪಾಲರು, ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ಹಾಗೂ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕಾ ಪಂಚಾಯತಿ ಚುನಾವಣೆಗಳನ್ನು ನಡೆಸದೆ ಬಿಜೆಪಿ,ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ವಿನಾಃ ಕಾರಣ ಕಾಲ ಹರಣ ಮಾಡಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಆಡಳಿತವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿವೆ ಇದು ಅವರ ದುರುದ್ದೇಶಪೂರಿತ ನಡೆಯಾಗಿದೆ ಎಂದು ಆರೋಪಿಸಿದ ಅವರು, ಕೂಡಲೇ ಚುನಾವಣಾ ಆಯೋಗ ಜಿಲ್ಲಾ ಪಂಚಾಯತಿ ಮತ್ತು ತಾಲೂಕಾ ಪಂಚಾಯತಿ ಚುನಾವಣೆಗಳನ್ನು ನಡೆಸುವ ಮೂಲಕ ಸ್ಥಳೀಯ ಆಡಳಿತದಲ್ಲಿ ಪಾರದರ್ಶಕತೆ ತರಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಗಳನ್ನು ನಡೆಸದೆ ಇರುವುದರಿಂದ ಸ್ಥಳೀಯ ಆಡಳಿತವು ಪಾರದರ್ಶಕತೆ ಕಳೆದುಕೊಂಡಿದೆ. ಇದರಿಂದ ಸಾರ್ವಜನಿಕರಿಗೆ ಸ್ಥಳೀಯ ಆಡಳಿತದಿಂದ ಸಿಗಬೇಕಾದ ಸರ್ಕಾರಿ ಸೌಲಭ್ಯಗಳು ದೊರೆಯದೆ ತೀವ್ರ ತೊಂದರೆ ಉಂಟಾಗಿದೆ ಎಂದು ಹೇಳಿದ ಅವರು, ಸದರಿ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ಮೀಸಲಾತಿ ನೆಪವೊಡ್ಡಿ ವಿನಾಕಾರಣ ಮುಂದೂಡುತ್ತ ಬರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಮೀಸಲಾತಿ ನೆಪವೊಡ್ಡಿ ಚುನಾವಣೆಗಳನ್ನು ಮುಂದೂಡದೆ ಈಗ ಇರುವ ಮೀಸಲಾತಿ ಆಧಾರದಲ್ಲಿ ಚುನಾವಣೆಗಳನ್ನು ನಡೆಸಬೇಕು. ಜೊತೆಗೆ ಅವಧಿ ಮುಗಿಯುವ ಮೊದಲೇ ಚುನಾವಣೆ ಘೋಷಿಸಿ ದೇಶದ ಸ್ಥಳೀಯ ಸಂಸ್ಥೆಗಳಿಗೆ ಕಾಲ-ಕಾಲಕ್ಕೆ ಚುನಾವಣೆ ಪ್ರಕ್ರಿಯೆಗಳನ್ನು ನಡೆಸುವ ಸೂಕ್ತ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಆರ್. ಎನ್. ನಾಗಶೆಟ್ಟಿ, ಕೃಷ್ಣಾ ಢಗೆ, ಲಕ್ಷ್ಮಣ ಹಿಪ್ಪರಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 