ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ರಾಜಶೇಖರ್ ಸುರಗೊಂಡ ಆಯ್ಕೆ

ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ರಾಜಶೇಖರ್ ಸುರಗೊಂಡ ಆಯ್ಕೆ  Rajasekhar was selected for the best teacher award at the taluk level


ರಾಣೆಬೆನ್ನೂರು:4 ಇಲ್ಲಿನ ಎಂ.ಜಿ. ಶಿಕ್ಷಣ ಸಂಸ್ಥೆಯ ಲಯನ್ಸ್‌ ಕನ್ನಡ ಮಾಧ್ಯಮ ಪ್ರೌಢಶಾಲೆಯ ಗಣಿತ ಶಿಕ್ಷಕ ರಾಜಶೇಖರ್ ಸುರಗೊಂಡ ಅವರು ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.  ಸೆಪ್ಟೆಂಬರ್ 5ರಂದು ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು.  ಪ್ರಶಸ್ತಿಗೆ ಭಾಜನರಾಗಿರುವ ರಾಜಶೇಖರ್ ಸುರಗೊಂಡ ಅವರನ್ನು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿ ಹಾರ್ದಿಕವಾಗಿ ಅಭಿನಂದಿಸಿದ್ದಾರೆ.