ರಾಜೇಂದ್ರ ಬಡೇಸಗೋಳ ರವರಿಗೆ ಪಿ.ಎಚ್.ಡಿ ಪದವಿ ಪ್ರಧಾನ
Rajendra Badesagol awarded Ph.D. degree
ಬೆಳಗಾವಿ, ನ.17: ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಜೇಂದ್ರ ಉದಯ ಬಡೇಸಗೋಳ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ’ಕರ್ನಾಟಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಒಂದು ಅಧ್ಯಯನ’ ಎಂಬ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ರಾಜೇಂದ್ರ ಬಡೇಸಗೋಳ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ.
ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ನಾಗರಾಜ ಹಳ್ಳಿಯವರ ರಾಜೇಂದ್ರ ಬಡೇಸಗೋಳ ಅವರಿಗೆ ಸಂಶೋಧನಾ ಮಾರ್ಗದರ್ಶಕರಾಗಿದ್ದರು. ಪ್ರಸ್ತುತ ರಾಜೇಂದ್ರ ಬಡೇಸಗೋಳ ಅವರು ಬೆಳಗಾವಿಯಲ್ಲಿ ಗುಪ್ತಚರ ಇಲಾಖೆಯಲ್ಲಿ ’ಹಿರಿಯ ಗುಪ್ತಚರ ಸಹಾಯಕ’ ಎಂದು ಕಾರ್ಯನಿರ್ವಹಿಸುತ್ತಿದ್ದಾರೆ. ಗುಪ್ತಚರ ಇಲಾಖೆಯಲ್ಲಿ ಇವರ ದಕ್ಷ ಮತ್ತು ಅಪ್ರತಿಮ ಕಾರ್ಯ ಸೇವೆಗೆ 2022 ರಲ್ಲಿ ಕರ್ನಾಟಕ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 