ರಾಜೀವ್ ಗಾಂಧಿ ಪುಣ್ಯಸ್ಮರಣೆ ಆಚರಣೆ; ಕಾಂಗ್ರೆಸ್ ಕಚೇರಿಯಲ್ಲಿ ಗೌರವ ನಮನ

ರಾಜೀವ್ ಗಾಂಧಿ ಪುಣ್ಯಸ್ಮರಣೆ ಆಚರಣೆ; ಕಾಂಗ್ರೆಸ್ ಕಚೇರಿಯಲ್ಲಿ ಗೌರವ ನಮನ Rajiv Gandhi's death anniversary celebrated; Tributes paid at Congress office

ಬಳ್ಳಾರಿ 21:  ನಗರದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ದೇಶದ ಆಧುನಿಕ ಭಾರತ ನಿರ್ಮಾಣಕ್ಕೆ ರಾಜೀವ್ ಗಾಂಧಿ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು. ಮಾಹಿತಿ ತಂತ್ರಜ್ಞಾನ ಹಾಗೂ ಡಿಜಿಟಲ್ ಕ್ರಾಂತಿಗೆ ಅಡಿಗಲ್ಲು ಹಾಕಿದ ದೂರದೃಷ್ಟಿಯ ನಾಯಕನಾಗಿ ಅವರು ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸಿದ್ದರು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಾನಯ್ಯ, ವಿರಸೇನಾ ರೆಡ್ಡಿ, ಕ್ರೈಸ್ತ ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕ ಜಿ.ಜೆ. ರವಿಕುಮಾರ್, ಡಿಸಿಸಿ ಕಾರ್ಯಾಧ್ಯಕ್ಷ ಬೊಯಪಾಟಿ ವಿಷ್ಣುವರ್ಧನ್, ಡಿಸಿಸಿ ಉಪಾಧ್ಯಕ್ಷ ಕೆ. ಶ್ರೀನಿವಾಸುಲು, ಪ್ರಧಾನ ಕಾರ್ಯದರ್ಶಿ ಆಯಾಜ್ ಅಹಮ್ಮದ್, ನಗರ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಈರಣ್ಣ ಗೌಡ, ಕೆಪಿಸಿಸಿ ವಕ್ತಾರ ಬಿ.ಎಂ. ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಇದೇ ವೇಳೆ ಮುಂಚೂಣಿ ಘಟಕಗಳ ಅಧ್ಯಕ್ಷರಾದ ಎರುಕುಲ ಸ್ವಾಮಿ, ಅಲಿವೇಲು ಸುರೇಶ್, ಧನುಂಜಯ್ ಹಮಲ್, ಶ್ರೀಕಾಂತ್, ಅತ್ತಾವುಲ್ಲ ಹಾಗೂ ಡಿಸಿಸಿ ಕಾರ್ಯಕಾರಿಣಿ ಸದಸ್ಯ ವೆಂಕಟಲಕ್ಷ್ಮಿ ನಾರಾಯಣ ಭಾಗವಹಿಸಿದ್ದರು. ಮುಖಂಡರಾದ ಬಿ.ಎ. ಮಲ್ಲೇಶ್ವರಿ, ಪರ್ವಿನ್ ಭಾನು, ಗೋನಾಳ್ ನಾಗಭೂಷಣ ಗೌಡ, ವಿಜಯ್, ಲಿಂಗರಾಜು ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.