ಮುದ್ದೇಬಿಹಾಳ 17: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಪ್ರತಿ ವರ್ಷದಂತೆ ನೀಡುವ ಈ ವರ್ಷದ 2024-25 ನೇ ಸಾಲಿನ ಪ್ರಶಸ್ತಿಗೆ ಮುದ್ದೇಬಿಹಾಳ ಪಟ್ಟಣದ ಮಾರುತಿನಗರ ನಿವಾಸಿಯಾದ ರಾಜುಗೌಡ ತುಂಬಗಿ ಆಯ್ಕೆಯಾಗಿದ್ದಾರೆ ಎಂದು ತಾಲೂಕು ಅಧ್ಯಕ್ಷ ವಿರೇಶ ಗುರುಮಠ ತಿಳಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ನೀಡುವ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆ0ಗಳೂರು (ರಿ) ಜನವರಿ 18 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಸವಣೂರು ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಈ ಪ್ರಶಸ್ತಿ ಸಮಾರಂಭ ನಡೆಯಲಿದೆ ಎಂದರು.
ಪ್ರತಿ ವರ್ಷವೂ ರಾಜ್ಯದ ವಿವಿದ ಜಿಲ್ಲೆಗಳಲ್ಲಿ ಸಾಮಾಜಿಕ, ಶೈಕ್ಷಣಿಕ, ಸೇರಿದಂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ನೀಡುವ ಪಶಸ್ತಿವು ಸಾಮಾಜಿಕ ಕ್ಷೇತ್ರದಲ್ಲಿ ರಾಜುಗೌಡ ತುಂಬಗಿ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ವಿಜಯಪುರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ ಎಂದರು.