ಬೆಂಗಳೂರು, ಜೂ.5,ರಾಜ್ಯಸಭಾ ಚುನಾವಣೆಗಾಗಿ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಅಖಾಡಕ್ಕಿಳಿಯಲಿರುವ ವಿಷಯವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಅಧಿಕೃತವಾಗಿ ಪ್ರಕಟಣೆಯಲ್ಲಿ ಹೊರಡಿಸಿದ್ದಾರೆ.ಈ ಮೂಲಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ಖರ್ಗೆ ಅವರಿಗೆ ಪಕ್ಷದಲ್ಲಿ ದೊಡ್ಡ ಮಟ್ಟದ ಯಾವ ಹುದ್ದೆಯನ್ನು ನೀಡಿರಲಿಲ್ಲ.