ನವದೆಹಲಿ, ಫೆ 12: ಕಳೆದ ಜುಲೈನಲ್ಲಿ ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಯಾವುದೇ ಅರ್ಜಿಯನ್ನು ವಿಚಾರಣೆಗೆ ನ್ಯಾಯಾಲಯ ನಿರ್ಧರಿಸಿದರೆ ತಮ್ಮ ಅಭಿಪ್ರಾಯ ಅಹವಾಲು ಕೇಳದೆ ಯಾವ ತೀರ್ಮಾನಕ್ಕೆ ಬರಬಾರದು ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯೆಟ್ ಹಾಕಿದ್ದಾರೆ.
ಮಾಜಿ ವಿದೇಶಾಂಗ ಕಾರ್ಯದರ್ಶಿ ಅವರು ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಬಹುದಾದ ಮನವಿಗಳ ಕುರಿತು ನ್ಯಾಯಾಲಯವು ಯಾವುದೇ ನಿರ್ದೇಶನಗಳನ್ನು ನೀಡುವ ಮೊದಲು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಲಾಗಿದೆ.
ಡಾ.ಜೈಶಂಕರ್ ಅವರ ಚುನಾವಣೆ ಆಯ್ಕೆ ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಗೌರವ್ ಪಾಂಡ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು 2020 ರ ಫೆಬ್ರವರಿ 4 ರಂದು ಗುಜರಾತ್ ಹೈಕೋರ್ಟ್ ವಜಾಗೊಳಿಸಿ ಅರ್ಜಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ತಿಳಿಸಿತ್ತು.
ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯಸಭೆ ಸ್ಥಾನಗಳಿಗೆ ಪ್ರತ್ಯೇಕ ಮತದಾನ ನಡೆಸುವ ಆಯೋಗದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿ ಚುನಾವಣೆಗಳನ್ನು ಒಟ್ಟಾಗಿ ನಡೆಸಬೇಕೆಂದು ಮನವಿ ಮಾಡಿತ್ತು.