ನ.1 ರಂದು ಬೆಟಗೇರಿಯಲ್ಲಿ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಣೆ
Rajyotsava celebration in Betageri on November 1st
ಬೆಟಗೇರಿ 30: ಬೆಟಗೇರಿ ರಾಜ್ಯೋತ್ಸವ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆ ಹಾಗೂ ಇಲ್ಲಿಯ ಸಾರ್ವಜನಿಕರ ಆಶ್ರಯದಲ್ಲಿ ಕಳೆದ 28 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತ ಬಂದಿದ್ದು, ಅದರ ಅಂಗವಾಗಿ ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯೋತ್ಸವವನ್ನು ನವಂಬರ-1 ಶನಿವಾರದಂದು ಅದ್ಧೂರಿಯಾಗಿ ಆಚರಿಸಲಾಗುವುದು.
ಅದರ ಅಂಗವಾಗಿ ಬೆಟಗೇರಿ ಶಾಲಾ ಕಾಲೇಜುಗಳ ಆಕರ್ಷಕ ರೂಪಕಗಳೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಬೆಟಗೇರಿಯ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಶಾಲಾ ಕಾಲೇಜು ಮುಖ್ಯಸ್ಥರು, ಶಿಕ್ಷಕ ಶಿಕ್ಷಕಿಯರು, ಸಿಬ್ಬಂದಿಯವರು ಹಾಗೂ ಸಾರ್ವಜನಿಕರು ಪಾಳ್ಗೊಳ್ಳಲಿರುವರು.
ನವಂಬರ-1 ರಂದು ಮುಂಜಾನೆ ಸರಿಯಾಗಿ 8-30 ಗಂಟೆಗೆ ನಡೆಯುವ ಈ ಕಾರ್ಯಕ್ರಮಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲರು, ಕಾರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಬೆಟಗೇರಿಯ ಎಲ್ಲ ನಗರಸಭಾ ಸದಸ್ಯರುಗಳು, ಡಿ.ಡಿ.ಪಿಐ. ಗದಗ, ಗದಗ ಶಹರ ಕ್ಷೇತ್ರಶಿಕ್ಷಣಾಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿರುವರು.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಶಾಲಾ ಕಾಲೇಜದವರು ಪಾಲ್ಗೊಳ್ಳಬೇಕೆಂದು ರಾಜ್ಯೋತ್ಸವ ಸಮಿತಿ ಅಧ್ಯಕ್ಷರಾದ ಗಣೇಶಸಿಂಗ ಬ್ಯಾಳಿ ವಿನಂತಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 