‘ರಕ್ತ ಕಾಶ್ಮೀರ’ದಲ್ಲಿ ಒಂದಾದ ಉಪೇಂದ್ರ, ರಮ್ಯ
Rakta Kashmir is ready for release
ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಬಹು ನೀರೀಕ್ಷಿತ ಈ ಚಿತ್ರ ಬಿಡುಗಡೆಗೆ ಸಿದ್ಧ
ಎಂ.ಡಿ.ಎಂ. ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ರಕ್ತ ಕಾಶ್ಮೀರ’ ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಇದೇ ಚಿತ್ರದ ಪ್ರಮುಖ ಕಥಾಹಂದರವಾಗಿದೆ. ಗಡಿ ಪ್ರದೇಶ ಅಷ್ಟೇ ಅಲ್ಲ. ಬೆಂಗಳೂರಿನಲ್ಲೂ ಉಗ್ರಗಾಮಿಗಳ ಕಾಟವಿದೆ. ಅದರ ನಿರ್ಮೂಲನೆಗೆ ಸಂಬಂಧಿಸಿದ ಕಥಾವಸ್ತುವನ್ನೂ ಈ ಚಿತ್ರ ಹೊಂದಿದೆ.
ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರೆ ‘ರಕ್ತ ಕಾಶ್ಮೀರ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ಎಂ.ಎಸ್ ರಮೇಶ್ ಅವರದು. ಗುರುಕಿರಣ್ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ, ರಮ್ಯ, ದೊಡ್ಡಣ್ಣ, ಓಂಪ್ರಕಾಶ್ ರಾವ್, ಅನಿಲ (ತೆಲುಗು ನಟಿ), ಕುರಿ ಪ್ರತಾಪ್ ಮುಂತಾದವರಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 