ವಿಶ್ವ ಜನಸಂಖ್ಯಾ ದಿನಾಚರಣೆ- 2026ರ ಅಂಗವಾಗಿ ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮ

 ವಿಶ್ವ ಜನಸಂಖ್ಯಾ ದಿನಾಚರಣೆ- 2026ರ ಅಂಗವಾಗಿ ಜಾಥಾ ಹಾಗೂ ಜಾಗೃತಿ  ಕಾರ್ಯಕ್ರಮ Rally and awareness program marking World Population Day 2026

ಲೋಕದರ್ಶನ ವರದಿ 

ಗದಗ  15:  ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ  ಜುಲೈ 15 ರಂದು  ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ 2026ರ ನಿಮಿತ್ಯ ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮವು ಜರುಗಿತು.  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎಸ್‌.ನೀಲಗುಂದ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಈ ವರ್ಷದ ಘೋಷವಾಕ್ಯವು ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವಿನ ಆರೋಗ್ಯಕರ ಅಂತರ ಕಾಪಾಡುವದರಿಂದ ತಾಯಿ ಮತ್ತು ಮಕ್ಕಳ ಆರೋಗ್ಯ ವೃದ್ಧಿಸುವುದರೊಂದಿಗೆ ಅನಗತ್ಯ ಗರ್ಭಧಾರಣೆಗಳನ್ನು ತಡೆಗಟ್ಟಬಹುದು.

ಎಂದು ಈ ವರ್ಷದ ಘೋಷವಾಕ್ಯ ಇದ್ದು ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಧರಿಸುವುದು, ಸೂಕ್ತವಾದ ವಯಸ್ಸಿನಲ್ಲಿ ಸದೃಡವಾದ ಮಕ್ಕಳನ್ನು ಪಡೆಯಲು ತಾಯಂದಿರು ಮಾಹಿತಿ ಪಡೆದುಕೊಂಡು ಆರೋಗ್ಯ ಇಲಾಖೆಯ ಸೇವೆಯನ್ನು ಪಡೆಯಬೇಕು. ತಾಯಿ ಮತ್ತು ಮಕ್ಕಳ ಆರೋಗ್ಯ ಕಾಪಾಡಿಕೊಂಡು ತಾಯಿ ಮತ್ತು ಮಗುವಿನ ಮರಣ ಪ್ರಮಾಣ ಕಡಿಮೆ ಮಾಡಬೇಕಾಗಿದೆ ಹಾಗೂ ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಕನಿಷ್ಠ 03 ವರ್ಷ ಅಂತರ ಕಾಪಾಡಿಕೊಳ್ಳಬೇಕು ಹಾಗೂ ತಾತ್ಕಾಲಿಕ ವಿಧಾನ, ಶಾಶ್ವತ ವಿಧಾನಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು  ಆರೋಗ್ಯ ಇಲಾಖೆಯಿಂದ ಸಿಗುತ್ತದೆ. ಹಾಗೂ ಬಾಲ್ಯವಿವಾಹವನ್ನು ತಡೆಗಟ್ಟಿ ಹೆಣ್ಣು ಮಕ್ಕಳು 18 ವರ್ಷ ಹಾಗೂ ಗಂಡು ಮಕ್ಕಳಿಗೆ 21 ವರ್ಷ ತುಂಬಿದ ನಂತರ ಮದುವೆಯಾಗಲು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.